ಪ್ರವಾಸ

ದಾವಣಗೆರೆ ಫೆ.26
ನಾಡೋಜ ಡಾ.ಮನು ಬಳಿಗಾರ್, ಅಧ್ಯಕ್ಷರು ಕನ್ನಡ
ಸಾಹಿತ್ಯ ಪರಿಷತ್ ಬೆಂಗಳೂರು ಇವರು
ಮಾ. 1 ರ ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾ. 1 ರಂದು ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನಿಂದ
ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸಿ, 11 ಗಂಟೆಗೆ
ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಜಿಲ್ಲಾ 10ನೇ ಕನ್ನಡ
ಸಾಹಿತ್ಯ ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸುವರು.
ಅಂದು ಸರ್ಕಾರಿ ಅಥಿತಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಮಾ.2 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ
ಸಮ್ಮೇಳನದ ವಿವಿಧ ಗೋಷ್ಠಿಯಲ್ಲಿ ಭಾಗವಹಿಸಿ ಮಧ್ಯಾಹ್ನ 3
ಗಂಟೆಗೆ ಬೆಂಗಳೂರಿಗೆ ನಿರ್ಗಮಿಸುವರು ಎಂದು ಅಧ್ಯಕ್ಷರ
ಗೌರವ ಕಾರ್ಯದರ್ಶಿಯಾದ ಕೆ.ರಾಜಕುಮಾರ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *