ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು
ಸಬಲೀಕರಣ ಮಂತ್ರಾಲಯ, ನವದೆಹಲಿ ಇವರು 2021-22ನೇ
ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ
ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ ವಯೋಶ್ರೇಷ್ಠ
ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿಗಳನ್ನು
ಆಹ್ವಾನಿಸಲಾಗಿದೆ.
   ಈ ಸಂಬಂಧ ಈ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಹಿರಿಯ ನಾಗರಿಕರು
ಮತ್ತು ಸ್ವಯಂ ಸೇವಾ ಸಂಸ್ಥೆಗಳು ಆಂಗ್ಲ ಭಾಷೆಯ
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಗಳಲ್ಲಿ
ಅರ್ಜಿಯನ್ನು ಮಾ.03 ರೊಳಗಾಗಿ ಕಚೇರಿಗೆ ಸಲ್ಲಿಸಬಹುದು.
   ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ hಣಣಠಿ://soಛಿiಚಿಟರಿusಣiಛಿe.ಟಿiಛಿ.iಟಿ  ಪರಿಶೀಲಿಸಲು
ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ
ಸಬಲೀಕರಣ ಇಲಾಖೆ, 14ನೇ ಮುಖ್ಯರಸ್ತೆ, ಕುವೆಂಪು ನಗರ,
ಶಂಕರ್‍ಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ.
ದೂ.ಸಂ: 08192-263939ನ್ನು ಸಂಪರ್ಕಿಸಬಹುದೆಂದು ಜಿಲ್ಲಾ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ
ಜಿ.ಎಸ್ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *