ಮಾ.02 ರಂದು ಬೆಳಿಗ್ಗೆ 10.30 ಕ್ಕೆ ಪೂಜಾ ಇಂಟರ್ ನ್ಯಾಷನಲ್
ಹೋಟೆಲ್, ಪಿ.ಬಿ.ರೋಡ್ ದಾವಣಗೆರೆ ಇಲ್ಲಿ ಭಾರತೀಯ ಗುಣಮಟ್ಟ
ಮಾನದಂಡ ಸಂಸ್ಥೆ(ಬಿಐಎಸ್), ಕೇಂದ್ರ ಸರ್ಕಾರದ ಕಚೇರಿ
ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ, ದಾವಣಗೆರೆ ಇವರ
ಸಂಯೋಜನೆಯೊಂದಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕಸಭಾ
ಸದಸ್ಯರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ
ಶಾಸಕರುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕೈಗಾರಿಕಾ
ಕೇಂದ್ರ ಜಂಟಿ ನಿರ್ದೇಶಕ ಜಯಪ್ರಕಾಶ ನಾರಾಯಣ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.