ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರ ದಾವಣಗೆರೆ
ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಇವರ
ಸಂಯುಕ್ತಾಶ್ರಯದಲ್ಲಿ ಮಾ. 6 ರಂದು ಬೆಳಿಗ್ಗೆ 10 ಗಂಟೆಗೆ
ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಟಿ.ಬಿ. ಸರ್ಕಲ್
ಹತ್ತಿರ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು
ಭಾಗವಹಿಸುತ್ತಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ,
ಬಿ.ಕಾಂ, ಬಿಎಸ್ಸಿ, ಬಿಬಿಎ/ಬಿಬಿಎಂ, ಬಿಸಿಎ ಹಾಗೂ ಸ್ನಾತಕೋತ್ತರ ಪದವಿ
ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಮಾ. 6 ರ ಶನಿವಾರ ಬೆಳಿಗ್ಗೆ 10
ಗಂಟೆಗೆ ಕನಿಷ್ಠ 10 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ
ಭಾಗವಹಿಸುವುದು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಿ,
ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ 08192-259446, 6361550016, 9743636369,
7406323294 ಗೆ ಸಂಪರ್ಕಿಸಿ ಉದ್ಯೋಗ ಮೇಳದ
ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಉದ್ಯೋಗ
ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್.
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *