ದೃಢೀಕರಣ ಮಾಡಿಸಿಕೊಳ್ಳಿ
ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ
ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ
ಕೂಡಲೇ ಭೇಟಿ ನೀಡಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ
ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಾದ್ಯಂತ ಪಡಿತರ ಚೀಟಿದಾರರ ಸೌಲಭ್ಯಕ್ಕಾಗಿ ಸರ್ಕಾರವು
ಇ-ಕೆವೈಸಿ(ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಎಂಬ
ಯೋಜನೆಯನ್ನು ಜಾರಿಗೊಳಿಸಿದ್ದು, ಅದರಂತೆ ಈಗಾಗಲೇ
ಕೆಲವು ಪಡಿತರ ಚೀಟಿದಾರರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ
ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಆಧಾರ್ ಬಯೋ
ದೃಢೀಕರಣ ಕಾರ್ಯವನ್ನು ಪೂರ್ಣಗೊಳಿಸಿರುತ್ತಾರೆ.
ಸರ್ಕಾರವು ಪುನಃ ಈ ಯೋಜನೆಗೆ ಚಾಲನೆ ನೀಡಿರುವುದರಿಂದ
ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ
ಚೀಟಿದಾರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ನ್ಯಾಯಬೆಲೆ
ಅಂಗಡಿಗೆ ಕೂಡಲೇ ಭೇಟಿ ನೀಡಿ (ಪ್ರತಿ ಮಾಹೆಯ 1ನೇ
ತಾರೀಖಿನಿಂದ 10ನೇ ತಾರೀಖಿನೊಳಗೆ ಮತ್ತು 25ನೇ ತಾರೀಖಿನಿಂದ
30ನೇ ತಾರೀಖೀನೊಳಗಾಗಿ) ತಮ್ಮ ಇ-ಕೆವೈಸಿ ಆಧಾರ್
ಬಯೋದೃಢೀಕರಣ ಕಾರ್ಯವನ್ನು ಮಾಡಿಸಿಕೊಳ್ಳಬೇಕೆಂದು
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.