ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ದಾವಣಗೆರೆ
ತಾಲ್ಲೂಕು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ
ಶಾಖೆ, ಒನ್ ಸ್ಟಾಪ್ ಸೆಂಟರ್(ಸಖಿ), ಮಹಿಳಾ ಶಕ್ತಿ ಕೇಂದ್ರ, ಸ್ತ್ರೀಶಕ್ತಿ
ಒಕ್ಕೂಟ, ಮಹಿಳಾ ಸಹಾಯವಾಣಿ ದಾವಣಗೆರೆ ಇವರ
ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ
ದಿನಾಚರಣೆ 2021 ನ್ನು ಮಾ.8 ರಂದು ಸೋಮವಾರ ಬೆಳಿಗ್ಗೆ 11
ಗಂಟೆಗೆ ತುಂಗಭದ್ರ ಸಭಾಂಗಣ, ಜಿಲ್ಲಾಡಳಿತ ಕಚೇರಿ
ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.
ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ
ಬಿ.ಎ.ಬಸವರಾಜ(ಭೈರತಿ) ಇವರು ಕಾರ್ಯಕ್ರಮದ
ಉದ್ಘಾಟನೆಯನ್ನು ನೆರವೇರಿಸುವರು. ಉತ್ತರ ಕ್ಷೇತ್ರದ
ವಿಧಾನಸಭಾ ಶಾಸಕರಾದ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ
ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾನ್ಯ ಮುಖ್ಯಮಂತ್ರಿಗಳ
ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ
ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಸಂಸದರಾದ
ಜಿ.ಎಂ.ಸಿದ್ದೇಶ್ವರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ
ಕೆ.ವಿ.ಶಾಂತಕುಮಾರಿ, ಚನ್ನಗಿರಿ ಕ್ಷೇತ್ರದ ಶಾಸಕರು ಹಾಗೂ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ
ಅಧ್ಯಕ್ಷರು ಮತ್ತು ನಿರ್ದೇಶನಕರಾದ ಮಾಡಾಳ್
ವಿರೂಪಾಕ್ಷಪ್ಪ, ಜಗಳೂರು ಕ್ಷೇತ್ರದ ಶಾಸಕರು ಹಾಗೂ
ಕರ್ನಾಟಕ ಮಹರ್ಷಿ ವಾಲ್ಮೀಕಿ, ಪರಿಶಿಷ್ಟ ಪಂಗಡಗಳ ಅಭಿವೃದ್ದಿ
ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಮಾಯಕೊಂಡ
ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು
ಜಗಜೀವನ್‍ರಾಂ ಚರ್ಮ ಕೈಗಾರಿಕಾ ನಿಗಮ ನಿಯಮಿತದ
ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ, ದಾವಣಗೆರೆ ದಕ್ಷಿಣ ಕ್ಷೇತ್ರದ
ಶಾಸಕರಾದ ಶಾಮನೂರು ಶಿವಶಂಕರಪ್ಪ, ವಿಧಾನ ಪರಿಷತ್
ಶಾಸಕರು, ದೂಡಾ ಅಧ್ಯಕ್ಷ ಎನ್.ಹೆಚ್.ಶಿವಕುಮಾರ್, ತಾ.ಪಂ
ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿಲ್ಲಾಧಿಕಾರಿ ಮಹಾಂತೇಶ
ಬೀಳಗಿ, ಜಿ.ಪಂ ಸಿಇಓ ಡಾ.ವಿಜಯಮಹಾಂತೇಶ ಬಿ.ದಾನಮ್ಮನವರ,
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ರಾಜ್ಯ ಸರ್ಕಾರಿ
ನೌಕರರ ಸಂಘದ ಅಧ್ಯಕ್ಷ ಬಿ.ಪಾಲಾಕ್ಷಿ, ರಾಜ್ಯ ಅಂಗನವಾಡಿ
ಕಾರ್ಯಕರ್ತೆಯರ ಮತ್ತು ಸಹಾಯಕಿಯರ
ಫೆಡರೇಷನ್‍ನ ರಾಜ್ಯಾಧ್ಯಕ್ಷ ಹೆಚ್.ಕೆ.ರಾಮಚಂದ್ರ, ಜಿಲ್ಲಾ
ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಜಿ.ಸಿ.ಮಂಗಳ, ತಾಲ್ಲೂಕು
ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶಕುಂತಲ ಪಾಲ್ಗೊಳ್ಳುವರು.
ಬಾಲ್ಯ ವಿವಾಹ, ಕ್ರಿಮಿನಲ್ ಕಾನೂನುಗಳು, ಪೋಕ್ಸೊ
ಕಾಯ್ದೆಯ ಕುರಿತು ವಕೀಲರಾದ ನೇತ್ರಾವತಿ ಹಾಗೂ
ವರದಕ್ಷಿಣೆ ನಿಷೇಧ, ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ
ಲೈಂಗಿಕ ಕಿರುಕುಳ ಕೌಟುಂಬಿಕ ಹಿಂಸೆ ಕುರಿತು ಐ.ಕೆ
ಮಂಜುಳ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ
ಜಿಲ್ಲೆಯ ಜಿ.ಪಂ, ಪಾಲಿಕೆ, ತಾಲ್ಲೂಕು ಪಂಚಾಯತ್ ಸದಸ್ಯರು,
ಜಿಲ್ಲಾ, ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಪದಾಧಿಕಾರಿಗಳು
ಪಾಲ್ಗೊಳ್ಳುವರೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ
ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.