ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್
ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ
ಜನಾಂಗದ ಶ್ರೇಯೋಭಿವೃದ್ದಿಗೆ ಶ್ರಮಿಸಿದ ಅರ್ಹ
ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ವರ್ಷ ಏ. 05
ರಂದು ಡಾ. ಬಾಬು ಜಗಜೀವನರಾಂ ರವರ ಹಾಗೂ ಏಪ್ರೀಲ್ 14
ರಂದು ಡಾ. ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆನ್ನು
ರಾಜ್ಯ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಡಾ. ಬಾಬು ಜಗಜೀವನರಾಂ ರವರ 114ನೇ ಜನ್ಮ ದಿನಾಚರಣೆ
ಮತ್ತು ಡಾ. ಬಿ.ಆರ್.ಅಂಬೇಡ್ಕರ್ ರವರ 130 ನೇ ಜನ್ಮ
ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ
ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪ.ಜಾತಿ/ಪ.ವರ್ಗದ
ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ,
ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ
2021-22 ನೇ ಸಾಲಿನ ಡಾ. ಬಾಬು ಜಗಜೀವನರಾಂ ಹಾಗೂ
ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು
ಉದ್ದೇಶಿಲಾಗಿರುತ್ತದೆ.
ಆಸಕ್ತರು ಸಮಾಜ ಕಲ್ಯಾಣ ಇಲಾಖೆಯ ಉಪನಿದೇರ್ಶಕರ
ಕಚೇರಿ, ದಾವಣಗೆರೆ (ರೂಂ ನಂ:37, ಜಿಲ್ಲಾಡಳಿತ ಭವನ,
ಕರೂರು ಇಂಡಸ್ಟ್ರಿಯಲ್ ಏರಿಯಾ, ದಾವಣಗೆರೆ) ಇಲ್ಲಿಗೆ
ಸಂಪರ್ಕಿಸಿ, ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ
ಕಚೇರಿಗೆ ಮಾ.30 ರೊಳಗೆ ಇದೇ ಕಚೇರಿಗೆ ಸಲ್ಲಿಸಬಹುದೆಂದು
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೇಷ್ಮಾ ಕೌಸರ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===
ಅರ್ಜಿ ಆಹ್ವಾನ