ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ
ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಇವರು 2021ನೇ ಏಪ್ರಿಲ್ 06
ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಏ.06 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು 11
ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕ
ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ/ಪ್ರಾಥಮಿಕ
ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸೌಲಭ್ಯಗಳ ಕುರಿತು
ಪರಿಶೀಲನೆ ನಡೆಸುವರು.
ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾ
ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ
ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ
ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19
ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ
ನಡೆಸಲಾಗುವುದು. ಸಂಜೆ 5 ಗಂಟೆಗೆ ಜಿಲ್ಲಾ ಭಾಜಪ
ಕಚೇರಿಗೆ ಭೇಟಿ, ಪಕ್ಷದ ಮುಖಂಡರು ಮತ್ತು
ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುವರು. ನಂತರ
ಸಂಜೆ 6 ಗಂಟೆಗೆ ರಸ್ತೆಯ ಮೂಲಕ ಕೇಂದ್ರಸ್ಥಾನ

ತಲುಪುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *