ಜಿಲ್ಲಾ ಪ್ರವಾಸ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ
ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಇವರು ಏಪ್ರಿಲ್ 06 ರಂದು
ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
  ಏ.06 ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು
11 ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಲ್ಲಾ ವ್ಯಾಪ್ತಿಯಲ್ಲಿನ
ಸಾರ್ವಜನಿಕ ಆಸ್ಪತ್ರೆ/ಸಮುದಾಯ ಆರೋಗ್ಯ
ಕೇಂದ್ರ/ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ
ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸುವರು.
 ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ
ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ
ಪರಿಶೀಲನಾ ಸಭೆ ಹಾಗೂ ಕೋವಿಡ್-19 ಮುನ್ನೆಚ್ಚರಿಕೆ
ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವರು. ಸಂಜೆ 5
ಗಂಟೆಗೆ  ಜಿಲ್ಲಾ ಭಾಜಪ ಕಚೇರಿಗೆ ಭೇಟಿ, ಪಕ್ಷದ
ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚೆ
ನಡೆಸುವರು. ನಂತರ ಸಂಜೆ 6 ಗಂಟೆಗೆ ರಸ್ತೆಯ
ಮೂಲಕ ಬೆಂಗಳೂರು ತಲುಪುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *