ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು
ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಏ.5 ರ
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಡಾ. ಬಾಬು
ಜಗಜೀವನ್ ರಾಂ ಅವರ 114ನೇ ಜಯಂತಿಯನ್ನು ಅವರ
ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ
ಆಚರಿಸಲಾಯಿತು.
        ಡಾ. ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ
ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಹಸಿರು
ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ
ಪ್ರಧಾನಿ
ಡಾ. ಬಾಬು ಜಗಜೀವನ್ ರಾಂ ಅವರ ಜಯಂತಿಯ ಮೂಲಕ ಅವರ
ಆದರ್ಶವನ್ನು ನಾವೆಲ್ಲಾ ಪಾಲಿಸಬೇಕು. ಅವರು ಸಮಾಜಕ್ಕೆ
ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರು ಹಾಕಿಕೊಟ್ಟ
ಮಾರ್ಗದಲ್ಲಿ ನಾವೆಲ್ಲ ನಡೆಯೋಣ ಎಂದರು.
       ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಜಿ.ಪಂ ಉಪಾಧ್ಯಕ್ಷೆ
ಸಾಕಮ್ಮ ಗಂಗಾಧರನಾಯ್ಕ, ಸದಸ್ಯರಾದ ಬಸವರಾಜಪ್ಪ,
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ಧಿ
ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಕೃಷಿ ಇಲಾಖೆ ಜಂಟಿ
ನಿರ್ದೇಶಕ ಶ್ರೀನಿವಾಸ ಚಿಂತಾಲ್, ಸಮಾಜ ಕಲ್ಯಾಣ ಇಲಾಖೆಯ
ನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಇಲಾಖೆಯ ನಿರ್ದೇಶಕ ವಿಜಯಕುಮಾರ್, ಹಿಂದುಳಿದ
ವರ್ಗಗಳ ಕಲ್ಯಾಣ ಅಧಿಕಾರಿ ಎಸ್.ಆರ್.ಗಂಗಪ್ಪ, ಅಲ್ಪಸಂಖ್ಯಾತರ
ಇಲಾಖೆಯ ಅಧಿಕಾರಿ ಅಮಿತ್ ಬಿದರಿ, ತೋಟಗಾರಿಗೆ ಇಲಾಖೆ ಉಪ
ನಿರ್ದೇಶಕ ಲಕ್ಷ್ಮೀಕಾಂತ ಬೊಮ್ಮಣ್ಣಾರ್, ಡಿಎಸ್‍ಎಸ್ ಜಿಲ್ಲಾ ಸಂಚಾಲಕ
ಕುಂದವಾಡ ಮಂಜುನಾಥ, ಡಿಎಸ್‍ಎಸ್ ಸದಸ್ಯ
ಬಿ. ದುಗ್ಗಪ್ಪ, ಹುಲಿಗೇಶ್, ಸೋಮ್ಲಾಪುರದ
ಹನುಮಂತಪ್ಪ, ಸಮಾಜದ ಇತರೆ ಮುಖಂಡರು,
ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *