ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು. ಯುಗಾದಿ
ಸಾಂಪ್ರಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ…