ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏ.08 ರಂದು
ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು,
ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು.
ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ
ಜನಸ್ಪಂದನ ಸಭೆಯ ಸದುಪಯೋಗ
ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.