ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ
ಬಿ.ಎ.ಬಸವರಾಜ ಅವರು
ಏ.21 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು 9.30ಕ್ಕೆ
ದಾವಣಗೆರೆ ಪ್ರವಾಸಿ ಮಂದಿರ (ಸಕ್ರ್ಯೂಟ್ ಹೌಸ್)ಕ್ಕೆ ಆಗಮಿಸುವರು.
ನಂತರ ಬೆ. 10 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ
ಭಾಗವಹಿಸುವರು. ಹಾಗೂ 11 ಗಂಟೆಗೆ ಜಿಲ್ಲಾಧಿಕಾರಿಗಳ
ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್-19
ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ
ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು
ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ
ಅಧಿಕಾರಿಗಳೊಂದಿಗೆ ಸಭೆ ಮತ್ತು ಜಿಲ್ಲೆಯ
ಕಾರ್ಯಕ್ರಮಗಳ ಅನುಷ್ಠಾನ ಬಗ್ಗೆ ಚರ್ಚೆ ನಡೆಸುವರು.
ಸಚಿವರು ಅದೇ ದಿನ ಮಧ್ಯಾಹ್ನ 2.30ಕ್ಕೆ ಬೆಂಗಳೂರಿಗೆ ಪ್ರಯಾಣ
ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.