ದಾವಣಗೆರೆ, ಏ.21
ದಾವಣಗೆರೆ ಜಿಲ್ಲೆಯಾದ್ಯಂತ ಕೋವಿಡ್ 19 ಸೋಂಕು
ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ
ಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ
ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ ಕಲಂ
144 ರನ್ವಯ ಜಿಲ್ಲಾಧಿಕಾರಿಗಳು ಏ.21 ರಿಂದ ಮೇ 04 ರವರೆಗೆ
ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ
ರಾತ್ರಿ ಕಫ್ರ್ಯೂವನ್ನು ಮತ್ತು ವಾರಾಂತ್ಯದ
ಕಫ್ರ್ಯೂವನ್ನು ಶುಕ್ರವಾರ ರಾತ್ರಿ 9 ರಿಂದ ಸೋಮವಾರ
ಬೆಳಿಗ್ಗೆ 6 ಗಂಟೆಯವರೆಗೆ ಘೋಷಿಸಿದ್ದಾರೆ.
ಸಾರ್ವಜನಿಕರು ಕಫ್ರ್ಯೂ ವೇಳೆ ಕೆಲವು ಷರತ್ತು ಮತ್ತು
ನಮೂದಿತ ಮಾರ್ಗಸೂಚಿಗಳನ್ನು ಪಾಲಿಸಬೇಕಿದ್ದು, ಈ
ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ
ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005
ರ ಸೆಕ್ಷನ್ 51 ರಿಂದ 60 ರ ಪ್ರಕಾರ ಕ್ರಮ
ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಆದೇಶಿಸಿರುತ್ತಾರೆ.

Leave a Reply

Your email address will not be published. Required fields are marked *