ಕೊರೊನಾ 19 ಸಾಂಕ್ರಾಮಿಕ ರೋಗ ಹೆಚ್ಚಾಗಿ
ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿ
ಅನ್ವಯವಾಗಿ ಏ.22 ರಂದು ಕಫ್ರ್ಯೂ ಜಾರಿಯಲ್ಲಿರುವುದರಿಂದ
ಹಾಗೂ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಆದೇಶದಂತೆ
ಏ.24 ರ ಶನಿವಾರ ಮತ್ತು ಏ.25 ರ ಭಾನುವಾರಗಳಂದು
ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಯಾವುದೇ
ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಮಾರುಕಟ್ಟೆಗೆ
ರಜಾ ದಿನವೆಂದು ಘೋಷಿಸಲಾಗಿದೆ ಎಂದು ಕೃಷಿ ಉತ್ಪನ್ನ
ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *