ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ
ಸಚಿವರಾದ ಬಿ.ಎ.ಬಸವರಾಜ ಇವರು
ಮೇ 7 ರ ಶುಕ್ರವಾರದಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಮೇ 7 ರ ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು
ಬೆಳಿಗ್ಗೆ 9.30 ಕ್ಕೆ ದಾವಣಗೆರೆಯ ಪ್ರವಾಸಿ ಮಂದಿರಕ್ಕೆ
ಆಗಮಿಸುವರು. ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಕೋವಿಡ್-19
ನಿಯಂತ್ರಣದ ಕುರಿತು ಕೈಗೊಳ್ಳಬೇಕಾಗಿರುವ
ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ
ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ
ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಸಭೆ
ನಡೆಸುವರು. ಮಧ್ಯಾಹ್ನ 1 ಗಂಟೆಗೆ ದಾವಣಗೆರೆಯಿಂದ
ನಿರ್ಗಮಿಸಿ ಮಧ್ಯಾಹ್ನ 4.30 ಕ್ಕೆ ಬೆಂಗಳೂರು ತಲುಪುವರು
ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ನಾಗರಾಜು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.