ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ ಮೊದಲನೆ ಡೋಸ್ ಪಡೆದು,
ಎಂಟು ವಾರ ಸಂಪೂರ್ಣವಾದ ಫಲಾನುಭವಿಗಳಿಗೆ ಆದ್ಯತೆ ಮೇಲೆ
ಸದ್ಯ 02 ನೇ ಡೋಸ್ ಮಾತ್ರ ಕೋವಿಶೀಲ್ಡ್ ಲಸಿಕೆಯನ್ನು ಜಿಲ್ಲೆಯ
ಎಲ್ಲಾ ನಿಗದಿತ ಆರೋಗ್ಯ ಕೇಂದ್ರಗಳಲ್ಲಿ ಮೇ. 05 ರಿಂದ
ನೀಡಲಾಗುವುದು. ಹೀಗಾಗಿ ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ
ಪಡೆದು ಎಂಟು ವಾರ ಪೂರ್ಣಗೊಂಡವರು ಮಾತ್ರ ಸದ್ಯ
ಆರೋಗ್ಯ ಕೇಂದ್ರಗಳಲ್ಲಿ ಕೋವಿಶೀಲ್ಡ್ ಲಸಿಕೆ
ಪಡೆದುಕೊಳ್ಳಬೇಕು, ಲಸಿಕಾ ಕೇಂದ್ರಕ್ಕೆ ಆಗಮಿಸುವ ಮೊದಲು
ಆನ್‍ಲೈನ್‍ನಲ್ಲಿ ನೊಂದಾಯಿಸಿಕೊಂಡಿರಬೇಕು ಎಂದು ಜಿಲ್ಲಾ ಆರೋಗ್ಯ
ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.
