ಹೆಲ್ಪ್‍ಡೆಸ್ಕ್ ಪ್ರಾರಂಭಿಸಿ- ಬಿ.ಎ. ಬಸವರಾಜ

ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್
ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರುವ ಬೆಡ್‍ಗಳು, ವೆಂಟಿಲೇಟರ್,
ಐಸಿಯು ಹಾಗೂ ಖಾಲಿ ಇರುವ ಬೆಡ್‍ಗಳ ಸಂಖ್ಯೆ ಸೇರಿದಂತೆ ಎಲ್ಲ
ವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಎಲ್ಲ
ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್‍ಡೆಸ್ಕ್ ಪ್ರಾರಂಭಿಸುವಂತೆ
ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.
ಬಸವರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು
ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ
ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ
ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ
ಏರ್ಪಡಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು
ಮಾತನಾಡಿದರು.
ಕೋವಿಡ್ ಸೋಂಕಿತರು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಿಗೆ
ಚಿಕಿತ್ಸೆಗಾಗಿ ಎಡತಾಕುತ್ತಿದ್ದು, ಅಲ್ಲಿ ಲಭ್ಯವಿರುವ ಬೆಡ್‍ಗಳ ವಿವರದ
ಮಾಹಿತಿ ಸಮರ್ಪಕವಾಗಿ ದೊರೆಯದೆ, ಅಥವಾ ಜವಾಬ್ದಾರಿಯುತ
ಅಧಿಕಾರಿಗಳಿಂದ ಮಾಹಿತಿ ಪಡೆಯದೆ ಆಸ್ಪತ್ರೆಯಿಂದ
ಆಸ್ಪತ್ರೆಗಳಿಗೆ ರೋಗಿಗಳು ಅಲೆದಾಡುತ್ತಿದ್ದಾರೆ, ಆಸ್ಪತ್ರೆಗಳ
ಪರಿಚಾರಕರು, ಗ್ರೂಪ್-ಡಿ ಸಿಬ್ಬಂದಿಗಳು, ಕಾವಲುಗಾರರೇ
ಸಾರ್ವಜನಿಕರಿಗೆ ಇಲ್ಲಿ ಬೆಡ್ ಖಾಲಿ ಇಲ್ಲ ಎಂದು ರೋಗಿಗಳನ್ನು
ಸಾಗಹಾಕುತ್ತಿದ್ದಾರೆ, ಆಂಬುಲೆನ್ಸ್ ವ್ಯವಸ್ಥೆ ಸಮರ್ಪಕವಾಗಿ
ದೊರೆಯುತ್ತಿಲ್ಲ ಎಂಬ ದೂರು, ಆರೋಪಗಳು ವ್ಯಾಪಕವಾಗಿ
ಕೇಳಿಬರುತ್ತಿವೆ. ಹೀಗಾಗಿ ಆಸ್ಪತ್ರೆಗಳಲ್ಲಿ ಭರ್ತಿಯಾಗಿರುವ
ಹಾಗೂ ಖಾಲಿ ಇರುವ ಬೆಡ್‍ಗಳ ವಿವರ ನಿಖರವಾಗಿ ಸಮಪರ್ಕವಾಗಿ
ಸಾರ್ವಜನಿಕರಿಗೆ ದೊರೆಯುವಂತಾಗಲು, ಸರ್ಕಾರಿ ಹಾಗೂ ಎಲ್ಲ ಖಾಸಗಿ
ಆಸ್ಪತ್ರೆಗಳ ಪ್ರವೇಶ ದ್ವಾರದಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್ ಡೆಸ್ಕ್
ಪ್ರಾರಂಭಿಸಬೇಕು. ಆಸ್ಪತ್ರೆವಾರು ಬೆಡ್‍ಗಳ ಭರ್ತಿ ಹಾಗೂ
ಲಭ್ಯತೆ ಕುರಿತ ವಿವರವುಳ್ಳ ಬುಲೆಟಿನ್ ಅನ್ನು ನಿತ್ಯ

ಜಿಲ್ಲಾಧಿಕಾರಿಗಳು ಪ್ರಕಟಿಸಬೇಕು. ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ
ಆಮ್ಲಜನಕ ಹಾಗೂ ರೆಮ್‍ಡೆಸಿವರ್ ಔಷಧ ಸಮರ್ಪಕ ಪೂರೈಕೆ
ಹಾಗೂ ಲಭ್ಯವಾಗುವಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳು
ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ
ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
13 ಕೆ.ಎಲ್. ಸಾಮಥ್ರ್ಯದ ಆಮ್ಲಜನಕ ಘಟಕ : ಸದ್ಯ ಜಿಲ್ಲಾ ಆಸ್ಪತ್ರೆ
ಆವರಣದಲ್ಲಿ 06 ಕೆ.ಎಲ್. ಸಾಮಥ್ರ್ಯದ ಆಕ್ಸಿಜನ್ ಘಟಕ ಸ್ಥಾಪಿಸಲಾಗಿದ್ದು,
ಇದರಿಂದ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. 13 ಕೆ.ಎಲ್.
ಸಾಮಥ್ರ್ಯದ ಇನ್ನೊಂದು ಆಮ್ಲಜನಕ ಘಟಕ ಸ್ಥಾಪನೆಗೆ
ಮಂಜೂರಾತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ
ಜಿಲ್ಲಾ ಉಸ್ತುವಾರಿ ಸಚಿವರು, ಮಂಜೂರಾತಿ ಪತ್ರಕ್ಕಾಗಿ ಕಾಯದೆ, 13
ಕೆ.ಎಲ್ ಸಾಮಥ್ರ್ಯದ ಆಮ್ಲಜನಕ ಘಟಕ ಸ್ಥಾಪನೆಗೆ ಬೇಕಾದ ಎಲ್ಲ
ಪ್ರಕ್ರಿಯೆಗಳನ್ನು ನೀವು ಪ್ರಾರಂಭಿಸಿ. ಇದಕ್ಕೆ ಸಂಪೂರ್ಣ
ಅಧಿಕಾರವನ್ನು ನಿಮಗೇ ಕೊಡುತ್ತಿದ್ದೇನೆ ಎಂದರು.
ಜಿಲ್ಲಾಧಿಕಾರಿಗಳು ಉತ್ತರಿಸಿ, 13 ಕೆ.ಎಲ್. ಸಾಮಥ್ರ್ಯದ ಘಟಕ ತಕ್ಷಣದಲ್ಲಿ
ದೊರೆಯುವುದು ಕಷ್ಟ. ಇವು ಗುಜರಾತ್‍ನಲ್ಲಿ ಮಾತ್ರ
ಉತ್ಪಾದನೆಯಾಗುತ್ತವೆ, ಆದರೂ ಸಂಬಂಧಪಟ್ಟವರಿಂದ ಮಾಹಿತಿ
ಪಡೆದು, ಆದಷ್ಟು ಶೀಘ್ರ ಘಟಕ ಸ್ಥಾಪನೆಗೆ ಪ್ರಾಮಾಣಿಕ
ಯತ್ನ ಮಾಡಲಾಗುವುದು ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ್
ಅವರು ಪ್ರತಿಕ್ರಿಯಿಸಿ, 13 ಕೆ.ಎಲ್. ಸಾಮಥ್ರ್ಯದ ಘಟಕ
ದೊರೆಯುವುದು ಕಷ್ಟವಿದ್ದಲ್ಲಿ, 06 ಕೆ.ಎಲ್. ಸಾಮಥ್ರ್ಯದ ಎರಡು
ಘಟಕ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ
ನೀಡಿದರು.
ಲಾಕ್‍ಡೌನ್ ಜಾರಿಗೆ ಒಕ್ಕೊರಲ ಮನವಿ : ಜಿಲ್ಲೆಯಲ್ಲಿ ಈವರೆಗೆ ಒಟ್ಟು 27222
ಕೋವಿಡ್ ಸೋಂಕು ಪತ್ತೆಯಾಗಿದ್ದು, ಈವರೆಗೆ ಒಟ್ಟಾರೆ 290 ಜನ
ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2534 ಸಕ್ರಿಯ
ಪ್ರಕರಣಗಳಿವೆ. ಈ ವರ್ಷ ಏಪ್ರಿಲ್‍ನಿಂದ ಈವರೆಗೆ ಕೋವಿಡ್‍ನ 3485
ಪ್ರಕರಣ ಪತ್ತೆಯಾಗಿದ್ದು, 26 ಮರಣ ದಾಖಲಾಗಿದೆ. ದಿನದಿಂದ
ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಜಿಲ್ಲಾ
ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ
ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿದ್ದ ಜನತಾ
ಕಫ್ರ್ಯೂ ಪರಿಣಾಮಕಾರಿಯಾಗಿಲ್ಲ. ಅಧಿಕಾರಿಗಳು, ಅಂಗನವಾಡಿ
ಹಾಗೂ ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಕೆಲಸ
ಮಾಡುತ್ತಿದ್ದರೂ, ಜನತಾ ಕಫ್ರ್ಯೂಗೆ ಸಾರ್ವಜನಿಕರ ಸಹಕಾರ
ದೊರೆಯುತ್ತಿಲ್ಲ. ಹಳ್ಳಿಗಳಲ್ಲಿ ಇಸ್ಪೀಟ್ ಆಡಲು ಜೂಜು ಅಡ್ಡೆಗಳು
ಪ್ರಾರಂಭವಾಗಿವೆ. ಜನರು ತಮ್ಮ ಸ್ವಭಾವ ಬದಲಿಸಿಕೊಳ್ಳದಿದ್ದರೆ
ಸರ್ಕಾರ ಮತ್ತು ಅಧಿಕಾರಿಗಳು ಏನೂ ಮಾಡಲು ಆಗಲ್ಲ. ಜನರ
ಪ್ರಾಣದ ಹಿತದೃಷ್ಟಿಯಿಂದ ಕೋವಿಡ್ ಸರಪಳಿಯನ್ನು
ತುಂಡರಿಸುವುದು ತೀವ್ರ ಅಗತ್ಯವಾಗಿದ್ದು, ಲಾಕ್‍ಡೌನ್
ಜಾರಿಗೊಳಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಮೇ. 31 ರವರೆಗೆ
ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸುವಂತೆ ಸಂಸದ ಜಿ.ಎಂ.
ಸಿದ್ದೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ
ಶಾಸಕ ರೇಣುಕಾಚಾರ್ಯ, ಶಾಸಕರುಗಳಾದ ಮಾಡಾಳ್
ವಿರೂಪಾಕ್ಷಪ್ಪ, ಎಸ್.ಎ. ರವೀಂದ್ರ, ಪ್ರೊ. ಲಿಂಗಣ್ಣ ಸೇರಿದಂತೆ ಎಲ್ಲ

ಜನಪ್ರತಿನಿಧಿಗಳು ಒಕ್ಕೊರಲ ಮನವಿ ಮಾಡಿದರು. ಇದಕ್ಕೆ
ಪ್ರತಿಕ್ರಿಯಿಸಿದ ಸಚಿವರು, ತಮ್ಮ ಮನವಿಯನ್ನು
ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸೂಕ್ತ ನಿರ್ಧಾರ
ಕೈಗೊಳ್ಳಲಾಗುವುದು ಎಂದರು.
ಸೋಂಕು ಮುಚ್ಚಿಡಬೇಡಿ : ಜನರು ತಮ್ಮಲ್ಲಿ ಜ್ವರ, ಕೆಮ್ಮು, ನೆಗಡಿ
ಸೇರಿದಂತೆ ಕೋವಿಡ್‍ನ ಯಾವುದೇ ರೋಗಲಕ್ಷಣಗಳು
ಇದ್ದರೂ, ಪರೀಕ್ಷೆಗೆ ಒಳಗಾಗಲು ಮುಂದಾಗುತ್ತಿಲ್ಲ. ಜ್ವರ,
ಕೆಮ್ಮಿಗೆ ಗುಳಿಗೆಗಳನ್ನು ನುಂಗಿ ಸುಮ್ಮನಾಗುವ ಪ್ರವೃತ್ತಿ
ತೋರಿಸುತ್ತಿದ್ದಾರೆ. ಗ್ರಾಮಗಳಲ್ಲಿ ಆಶಾ, ಅಂಗನವಾಡಿ
ಕಾರ್ಯಕರ್ತೆಯರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಇವರಿಗೂ
ಸಹಕಾರ ನೀಡುತ್ತಿಲ್ಲ. ತೀವ್ರ ಉಸಿರಾಟ ತೊಂದರೆ ಪ್ರಾರಂಭವಾದಾಗ
ಆಸ್ಪತ್ರೆಗೆ ಬರುತ್ತಾರೆ. ರೋಗ ತೀವ್ರ ಉಲ್ಬಣವಾದಾಗ ಆಸ್ಪತ್ರೆಗೆ
ಬಂದರೆ ಅವರಿಗೆ ಚಿಕಿತ್ಸೆ ದೊರಕುವುದು ಕಷ್ಟಸಾಧ್ಯ. ಹೀಗಾಗಿ
ಸಾರ್ವಜನಿಕರು ರೋಗ ಮುಚ್ಚಿಡುವುದರಿಂದ ಆ ರೋಗಿಗೆ
ಮಾತ್ರವಲ್ಲ ತಮ್ಮ ಕುಟುಂಬ, ಅಕ್ಕಪಕ್ಕದವರು, ಇಡೀ ಗ್ರಾಮವೇ
ತೊಂದರೆಗೆ ಸಿಲುಕುತ್ತದೆ ಎಂಬ ಅಂಶವನ್ನು ಅರಿತು ಜವಾಬ್ದಾರಿಯಿಂದ
ವರ್ತಿಸಬೇಕು. ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಬೇಕು.
ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಅನಗತ್ಯವಾಗಿ
ಮನೆಯಿಂದ ಹೊರಗೆ ಅಡ್ಡಾಡುವುದನ್ನು ಬಿಡಬೇಕು ಎಂದು
ಸಚಿವರು, ಸಂಸದರು ಒಳಗೊಂಡಂತೆ ಎಲ್ಲ ಶಾಸಕರುಗಳು,
ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು.
ವಾರದೊಳಗೆ ಕೋವಿಡ್ ಇಳಿಮುಖವಾಗಬೇಕು : ಜಿಲ್ಲೆಯಲ್ಲಿ
ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿದ್ದ ಜನತಾ
ಕಫ್ರ್ಯೂ ಪರಿಣಾಮಕಾರಿಯಾಗಿ ಜಾರಿಗೊಂಡಿಲ್ಲ. ಜನರು ಹಾಗೂ
ವಾಹನಗಳು ನಿಗದಿತ ಅವಧಿಯ ಬಳಿಕವೂ ಅನಗತ್ಯವಾಗಿ
ರಸ್ತೆಯಲ್ಲಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ತರಕಾರಿ
ಮತ್ತಿತರ ಸಾಮಗ್ರಿ ಖರೀದಿ ಸ್ಥಳದಲ್ಲಿ ಈಗಲೂ ಜನಸಂದಣಿ
ಕಂಡುಬರುತ್ತಿದೆ. ಹೀಗಾದಲ್ಲಿ ಕೋವಿಡ್ ಇನ್ನಷ್ಟು ವ್ಯಾಪಕವಾಗಿ
ಹರಡಲು ಕಾರಣವಾಗುತ್ತದೆ. ಸದ್ಯ ಜಿಲ್ಲೆಯಲ್ಲಿ 2534 ಸಕ್ರಿಯ
ಪ್ರಕರಣಗಳಿವೆ. ಬರುವ ಒಂದು ವಾರದ ಒಳಗಾಗಿ ಕೋವಿಡ್
ಪ್ರಕರಣಗಳ ಸಂಖ್ಯೆ ಇಳಿಮುಖಗೊಳಿಸಲು ಜಿಲ್ಲಾಡಳಿತ ಹಾಗೂ
ಪೊಲೀಸ್ ಇಲಾಖೆ ಇನ್ನಷ್ಟು ನಿರ್ದಾಕ್ಷಿಣ್ಯ ಹಾಗೂ ಕಠಿಣ ಕ್ರಮ
ಜರುಗಿಸಲು ಮುಂದಾಗಬೇಕು. ತಹಸಿಲ್ದಾರರು, ಪೊಲೀಸ್
ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಕಠಿಣಾತಿ ಕಠಿಣ
ಕ್ರಮಗಳನ್ನು ಕೈಗೊಳ್ಳಲಿ. ಯಾವುದೇ ಕಠಿಣ ಕ್ರಮಗಳಿಗೆ
ನಾವು ಬೆಂಬಲ ನೀಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವರು
ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು
ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೆ ಸಂಸದರು,
ಶಾಸಕರುಗಳೂ ಕೂಡ ಬೆಂಬಲಿಸುವುದಾಗಿ ಭರವಸೆ ನೀಡಿದರು.
ಸಮರ್ಪಕ ಲಸಿಕೆ ದೊರಕಿಸಲು ಕ್ರಮ : ಜಿಲ್ಲೆಯಲ್ಲಿ ಈವರೆಗೆ
14697 ಆರೋಗ್ಯ ಕಾರ್ಯಕರ್ತರು, 5916 ಮುಂಚೂಣಿ
ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ. 45 ವರ್ಷ ಮೇಲ್ಪಟ್ಟ 153130
ಜನರಿಗೆ ಮೊದಲ ಡೋಸ್, 25571 ಜನರಿಗೆ ಎರಡನೆ ಡೋಸ್ ಕೋವಿಡ್
ನಿರೋಧಕ ಲಸಿಕೆ ನೀಡಲಾಗಿದೆ. ಈವರೆಗೆ ಚನ್ನಗಿರಿ ತಾಲ್ಲೂಕಿಗೆ
ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಸೇರಿದಂತೆ ಒಟ್ಟು 39700 ಡೋಸ್,
ಹೊನ್ನಾಳಿ-32610, ಹರಿಹರ-29250, ಜಗಳೂರು-16270, ಹಾಗೂ

ದಾವಣಗೆರೆ ತಾಲ್ಲೂಕಿಗೆ 67520 ಡೋಸ್ ಲಸಿಕೆ ಪೂರೈಸಲಾಗಿದೆ.
ಈವರೆಗೆ ಒಟ್ಟು 1.84 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ 22620
ಡೋಸ್ ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೋವಿಶೀಲ್ಡ್
ಲಸಿಕೆ ಪೂರೈಕೆಯಾಗುತ್ತಿದ್ದು, ಕೋವ್ಯಾಕ್ಸಿನ್ ಲಸಿಕೆ
ಪೂರೈಕೆಯಾಗುತ್ತಿಲ್ಲ. ಕೋವ್ಯಾಕ್ಸಿನ್‍ನ 850 ಜನ ಎರಡನೆ
ಡೋಸ್ ಪಡೆಯುವುದು ಬಾಕಿ ಉಳಿದಿದ್ದು, ಕೋವ್ಯಾಕ್ಸಿನ್ ಲಸಿಕೆ
ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಸದ್ಯ
ಜಿಲ್ಲೆಯಲ್ಲಿ ಕೋವಿಶೀಲ್ಡ್‍ನ 2ನೇ ಡೋಸ್ ಬಾಕಿ ಇರುವವರಿಗೆ ಮಾತ್ರ
ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರ್.ಸಿಹೆಚ್
ಅಧಿಕಾರಿ ಡಾ. ಮೀನಾಕ್ಷಿ ತಿಳಿಸಿದರು. ಸಂಸದರು ಪ್ರತಿಕ್ರಿಯಿಸಿ ಜಿಲ್ಲೆಗೆ
ನಿತ್ಯ 40 ರಿಂದ 50 ಸಾವಿರ ಡೋಸ್ ಲಸಿಕೆ ಪೂರೈಕೆಯಾಗಬೇಕು.
ಅಂದಾಗ ಮಾತ್ರ ಲಸಿಕಾಕರಣ ಪರಿಣಾಮಕಾರಿಯಾಗಿಸಲು ಸಾದ್ಯ. ಈ
ನಿಟ್ಟಿನಲ್ಲಿ ಸಚಿವರು ಸರ್ಕಾರದ ಮಟ್ಟದಲ್ಲಿ ಪ್ರಯತ್ನ
ಮಾಡಬೇಕು ಎಂದು ಮನವಿ ಮಾಡಿದರು. ಉತ್ತರಿಸಿದ ಸಚಿವರು
ಸರ್ಕಾರ 3 ಕೋಟಿ ಲಸಿಕೆ ಖರೀದಿಗೆ ಕ್ರಮ ಕೈಗೊಂಡಿದೆ ಅಲ್ಲದೆ, 1.20
ಕೋಟಿ ರೆಮ್‍ಡೆಸಿವರ್ ಔಷಧಿ ಖರೀದಿಗೂ ಮುಂದಾಗಿದೆ. ಬರುವ ಒಂದು
ವಾರದೊಳಗೆ ಲಸಿಕೆ ಪೂರೈಕೆ ಸಮರ್ಪಕವಾಗಲಿದೆ ಎಂದು
ಭರವಸೆ ನೀಡಿದರು.
ಕೋವಿಡ್ ಕೇರ್ ಸೆಂಟರ್‍ಗೆ ಕರೆತನ್ನಿ : ಜಿಲ್ಲಾ ಕೇಂದ್ರ ಹಾಗೂ ಎಲ್ಲ
ತಾಲ್ಲೂಕುಗಳಲ್ಲಿಯೂ ಹಾಸ್ಟೆಲ್ ಮುಂತಾದೆಡೆ ಕೋವಿಡ್ ಕೇರ್
ಸೆಂಟರ್‍ಗಳನ್ನು ಪ್ರಾರಂಭಿಸಿ ಉತ್ತಮ ಊಟೋಪಹಾರ,
ವೈದ್ಯಕೀಯ ನೆರವು ಕಲ್ಪಿಸಲಾಗುತ್ತಿದೆ. ರೋಗಲಕ್ಷಣ ರಹಿತ
ಹಾಗೂ ಕಡಿಮೆ ತೀವ್ರತೆಯ ಕೋವಿಡ್ ಸೋಂಕಿತರಿಗೆ ಮನೆಗಳಲ್ಲಿ
ಪ್ರತ್ಯೇಕವಾದ ಮೂಲಭೂತ ಸೌಕರ್ಯ ಇಲ್ಲದಿದ್ದಲ್ಲಿ, ಹೋಂ
ಐಸೋಲೇಷನ್‍ಗೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ
ಅವರನ್ನು ಆದಷ್ಟು ಕೋವಿಡ್ ಕೇರ್ ಸೆಂಟರ್‍ಗೆ ಕರೆತರುವ
ಪ್ರಯತ್ನವನ್ನು ಅಧಿಕಾರಿಗಳು ಮಾಡಬೇಕು. ಸದ್ಯ
ಜಿಲ್ಲೆಯಲ್ಲಿ 1095 ಜನ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕೋವಿಡ್
ಕೇರ್ ಸೆಂಟರ್‍ನಲ್ಲಿ ಉತ್ತಮ ಊಟೋಪಹಾರ, ವೈದ್ಯಕೀಯ ನೆರವು
ಸೇರಿದಂತೆ ಸಮರ್ಪಕ ವ್ಯವಸ್ಥೆ ದೊರಕಿಸುವ ವಿಶ್ವಾಸವನ್ನು
ಅಧಿಕಾರಿಗಳು ರೋಗಿಗಳಿಗೆ ನೀಡಬೇಕು. ಸಮರ್ಪಕ ವ್ಯವಸ್ಥೆ
ಇಲ್ಲದೆ ಹೋಂ ಐಸೋಲೇಷನ್‍ಗೆ ಒಳಗಾಗುವವರು,
ಸೋಂಕನ್ನು ವ್ಯಾಪಕವಾಗಿ ಹರಡಲು ಕಾರಣಕರ್ತರಾಗುತ್ತಾರೆ
ಎಂಬುದನ್ನು ಅಧಿಕಾರಿಗಳು ಮರೆಯಬಾರದು ಎಂದು ಜಿಲ್ಲಾಧಿಕಾರಿ
ಮಹಾಂತೇಶ್ ಬೀಳಗಿ ಅವರು ಹೇಳಿದರು.
ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಮುಖ್ಯಮಂತ್ರಿಗಳ
ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ,
ಶಾಸಕರುಗಳಾದ ಮಾಡಾಳ್ ವಿರೂಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್,
ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ವಿಜಯಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಹನುಮಂತರಾಯ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್,
ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್
ಡಾ. ಜಯಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು,
ತಾಲ್ಲೂಕುಗಳ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ
ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *