ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ
ಎಂ.ಪಿ.ರೇಣುಕಾಚಾರ್ಯರವರು ಮೇ 12 ಮತ್ತು 13 ರಂದು
ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ 11 ರಂದು ಸಂಜೆ 4.30 ಕ್ಕೆ ಬೆಂಗಳೂರಿನಿಂದ ಹೊರಟು
ರಾತ್ರಿ 9.30 ಕ್ಕೆ ಹೊನ್ನಾಳಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಮೇ 12 ರ ಬೆಳಿಗ್ಗೆ 10.30 ರಿಂದ ಸಂಜೆ 6 ಗಂಟೆಯವರೆಗೆ
 ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ
ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು ಮತ್ತು ಪ್ರಾಥಮಿಕ
ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19
ಸೋಂಕಿತರ ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳ
ಬಗ್ಗೆ ವೀಕ್ಷಣೆ ಹಾಗೂ ಅವಳಿ ತಾಲ್ಲೂಕುಗಳ ಗ್ರಾಮಗಳ
ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ
ಖಾತರಿ ಯೋಜನೆಯಡಿ ಅನುಷ್ಠಾನಗೊಳಸಲಾಗುತ್ತಿರುವ
ಕಾಮಗಾರಿಗಳ ವೀಕ್ಷಣೆ ಮತ್ತು ಕೋವಿಡ್-19 ಹರಡುವಿಕೆ
ತಡೆಗಟ್ಟುವ ಕುರಿತು ತೆಗೆದುಕೊಳ್ಳಬೇಕಾಗಿರುವ
ಮುಂಜಾಗ್ರಾತಾ ಕ್ರಮಗಳ ಬಗ್ಗೆ/ಲಸಿಕೆಯ ಮಹತ್ವದ ಬಗ್ಗೆ
ಜಾಗೃತಿ ಮೂಡಿಸುವರು. ನಂತರ ಹೊನ್ನಾಳಿಗೆ ತೆರಳಿ
ಅಲ್ಲಿಯೇ ವಾಸ್ತವ್ಯ ಮಾಡುವರು.
ಮೇ 13 ರಂದು ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆ ಆಗಮಿಸಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ
ಅಧ್ಯಕ್ಷತೆಯಲ್ಲಿ ಕೋವಿಡ್ -19 ನಿಯಂತ್ರಣದ ಕುರಿತು
ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ
ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಮಟ್ಟದ
ಅಧಿಕಾರಿಗಳೊಂದಿಗೆ ನಡೆಯುವ ಸಭೆಯಲ್ಲಿ
ಭಾಗವಹಿಸುವರು. ಹಾಗೂ ಜಿಲ್ಲೆಯ  ವಿವಿಧ ತಾಲ್ಲೂಕುಗಳಲ್ಲಿ
ಕೋವಿಡ್ ನಿರ್ವಹಣೆಯ ಕುರಿತು ಜರುಗುವ ಸಭೆಯಲ್ಲಿ
ಭಾಗವಹಿಸುವರು. ನಂತರ ಸಂಜೆ 5.30 ಕ್ಕೆ ಹೊನ್ನಾಳಿಗೆ
ಪ್ರಯಾಣ ಬೆಳೆಸುವರೆಂದು ಮುಖ್ಯಮಂತ್ರಿಗಳ
ರಾಜಕೀಯ ಕಾರ್ಯದರ್ಶಿಗಳ ವಿಶೇಷ ಕರ್ತವ್ಯಾಧಿಕಾರಿ
ಕೆ.ರುದ್ರೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *