ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಕೊರೊನಾ ವಾರಿಯರ್ಸ್ ನ್ನು ಸನ್ಮಾನಿಸುವ ಹಾಗೂ ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು. ಚಾಮರಾಜಪೇಟೆ ಶಾಸಕರೂ ಆಗಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್, ಹೆಬ್ಬಾಳ ಶಾಸಕ ಬೈರತಿ ಸುರೇಶ್ ಹಾಜರಿದ್ದರು.