ಹೊನ್ನಾಳಿ : ತಾಲೂಕಿನ ಘಂಟ್ಯಾಪುರ ಗ್ರಾಮದ ಬಹುತೇಕರಿಗೆ ಶೀತ,ಕೆಮ್ಮು ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದರು.
ಗ್ರಾಮದಲ್ಲಿ 17 ಜನರಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದು ಅದರಲ್ಲಿ 5 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಗ್ರಾಮದ ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ವೈದ್ಯರಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿಯೂ ಇದೇ ಪರಿಸ್ಥಿತಿ ಇದ್ದು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಮನವಿ ಮಾಡಿ ಬಂದ ಪರಿಣಾಮ ಗ್ರಾಮಸ್ಥರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು ಗ್ರಾಮದಲ್ಲಿ ಸದ್ಯ ಪರಿಸ್ಥಿತಿ ಸುಧಾರಿಸಿದೇ, ಅದೇ ರೀತಿ ಘಂಟ್ಯಾಪುರ ಗ್ರಾಮಸ್ಥರು ಕೂಡ ಕೊರೊನಾ ಪರೀಕ್ಷೆ ಮಾಡಿಕೊಂಡು ಕೊರೊನಾದಿಂದ ದೂರ ಇರೀ ಎಂದರು.
ಘಂಟ್ಯಾಪುರ ಗ್ರಾಮಸ್ಥರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಪಾಸಿಟಿವ್ ಬಂದರೆ ಸೂಕ್ತ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿಸುತ್ತೇನೆ ಯಾರೂ ಅದೈರ್ಯಗೆಡಬೇಡಿ ನಿಮ್ಮೊಂದಿಗೆ ನಾನಿದ್ದೇನೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಶಾಸಕರ ಮನವಿಗೆ ಸ್ಪಂಧಿಸಿದ ಗ್ರಾಮಸ್ಥರು. ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವ ಬರಸವೆ ನೀಡಿದರು. ಕೊರೊನಾ ಸೋಂಕಿ ಸಮುದಾಯಕ್ಕೂ ಹಬ್ಬುತ್ತಿದ್ದು ಜನರು ಇನ್ನಾದರೂ ಕೊರೊನಾದಿಂದ ದೂರ ಇರೀ ಎಂದರು.
5 ಜನರಿಗೆ ಪಾಸಿಟಿವ್ : ಇದಕ್ಕೂ ಮೊದಲು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ರಾಘವನ್ ನೇತೃತ್ವವದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಕೆಂಚಪ್ಪ ಮತ್ತು ತಂಡ 1780 ಜನಸಂಖ್ಯೆ ಇರುವ ಗ್ರಾಮದಲ್ಲಿ 17 ಜನರಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದು ಅವರಲ್ಲಿ 5 ಜನರಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ|| ಕೆಂಚಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ರಾಘವನ್, ತಾಲೂಕು ವೈದ್ಯಾಧಿಕಾರಿ ಡಾ.ಕೆಂಚಪ್ಪ,ತಾ.ಪಂ.ಇಓ.ಗಂಗಾಧರಮೂರ್ತಿ,ಪಿಡಿಓ ಮಮತಾ, ಜಿ.ಪಂ.ಸದಸ್ಯ ಸುರೇಂದ್ರನಾಯ್ಕ್, ತಾಂಡ ಅಭಿವೃಧ್ಧಿ ನಿಗಮದ ನಿರ್ದೇಶಕ ಮಾರುತಿನಾಯ್ಕ್ ಸೇರಿದಂತೆ ಇತರರಿದ್ದರು.
ಚಿತ್ರ ಸುದ್ದಿ 01 ; ತಾಲೂಕಿನ ಘಂಟ್ಯಾಪುರ ಗ್ರಾಮದಲ್ಲಿ ಕೆಮ್ಮು,ಶೀತ ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಗ್ರಾಮಕ್ಕೆ ಭೇಟಿ ನೀಡಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.