ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
ಎಂ.ಪಿ.ರೇಣುಕಾಚಾರ್ಯ ಅವರು ಮೇ 19 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
    ಅಂದು ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಹೊನ್ನಾಳಿ
ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ
ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ
ಭೇಟಿ ನೀಡಿ, ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ತೆಗೆದುಕೊಂಡಿರುವ
ಕ್ರಮಗಳ ಬಗ್ಗೆ ವೀಕ್ಷಣೆ ನಡೆಸುವರು ಹಾಗೂ ಮಹಾತ್ಮಾ ಗಾಂಧಿ
ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ
ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ವೀಕ್ಷಣೆ
ನಡೆಸುವರು. ಅಲ್ಲದೆ ಕೋವಿಡ್-19 ಹರಡುವಿಕೆ ತಡೆಗಟ್ಟುವ
ಕುರಿತು ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ
ಕ್ರಮಗಳ ಬಗ್ಗೆ, ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ
ಮೂಡಿಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ
ತಿಳಿಸಿದ್ದಾರೆ.

Leave a Reply

Your email address will not be published. Required fields are marked *