ಮಹರ್ಷಿ ಭಗೀರಥ ಜಯಂತಿಯನ್ನು ಕೋವಿಡ್ ಸಾಂಕ್ರಾಮಿಕ
ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ
ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಸರಳವಾಗಿ
ಆಚರಿಸಲಾಯಿತು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯವರು ಸೇರಿದಂತೆ ವಿವಿಧ
ಅಧಿಕಾರಿಗಳು ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ
ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ,
ಜಿ.ಪಂ. ಉಪಕಾರ್ಯದರ್ಶಿ ಆನಂದ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ
ಸಹಾಯಕ ನಿರ್ದೇಶಕ ರವಿಚಂದ್ರ, ರಾಜ್ಯ ಉಪ್ಪಾರ ನೌಕರರ
ಸಂಘದ ಅಧ್ಯಕ್ಷ ಎನ್.ಎಸ್. ಚಂದ್ರಪ್ಪ, ರಾಜ್ಯ ಉಪ್ಪಾರ ಮಹಾಸಭಾ
ಕಾರ್ಯಾಧ್ಯಕ್ಷ ಭರತ್ ಎಸ್ ಮೈಲಾರ್, ಜಿಲ್ಲಾ ಉಪ್ಪಾರ ನೌಕರರ
ಸಂಘದ ಪ್ರಧಾನ ಕಾರ್ಯದರ್ಶಿ ಜಿ. ರಾಮಪ್ಪ ಸೇರಿದಂತೆ ವಿವಿಧ
ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.