ಸಭೆ
ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ
ಬಸವರಾಜ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು
ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಇವರು ಮೇ.20
ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ
ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19
ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಸಲಿದ್ದಾರೆಂದು
ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.