ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ
ಎಂ.ಪಿ.ರೇಣುಕಾಚಾರ್ಯರವರು ಮೇ 26 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಹೊನ್ನಾಳಿ
ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ
ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ
ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ
ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವೀಕ್ಷಣೆ ಮತ್ತು
ಕೋವಿಡ್-19 ಹರಡುವಿಕೆ ತಡೆಗಟ್ಟುವ ಕುರಿತು
ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ
ಬಗ್ಗೆ/ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವರು,
ನಂತರ ಹೊನ್ನಾಳಿಗೆ ಪ್ರಯಾಣ ಬೆಳೆಸುವರೆಂದು ಅವರ
ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.