ಕೊರೋನಾ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದ ಕೂಲಿ ಕಾರ್ಮಿಕರು, ನಿರ್ಗತಿಕರು, ಬಡವರ್ಗದವರು ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು, ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ಅಶೀರ್ವಾದ ಹಾಗೂ ಸಹಕಾರದೊಂದಿಗೆ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಶಿವಮೊಗ್ಗ ನಗರದ ಮಲ್ಲಿಗೇನಗಳ್ಳಿಯಲ್ಲಿ ಗುಡಿಸಲುಗಳಲ್ಲಿ ವಾಸವಾಗಿರುವ ನೂರಾರು ಬಡ ಕುಟುಂಬಗಳಿಗೆ ಊಟ, ನೀರು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.⤵️

ಈ ಕಾರ್ಯಕ್ರಮಕ್ಕೆ ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರಾದ ಶ್ರೀ ಕಿಮ್ಮನೆ ರತ್ನಾಕರ್ ರವರು, ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ರವರು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಒಕ್ಕಲಿಗ ಮುಖಂಡರಾದ ಶ್ರೀ ರಮೇಶ್ ಹೆಗ್ಡೆರವರು, ಶ್ರೀಮತಿ ಯಮುನಾ ರಂಗೇಗೌಡರವರು, ಕಾಂಗ್ರೆಸ್ ಮುಖಂಡರಾದ ರಂಗೇಗೌಡರವರು, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ವೇದಾ ವಿಜಯ್ ಕುಮಾರ್(ದನಿ)ರವರು, ಕಾಂಗ್ರೆಸ್ ಮುಖಂಡರಾದ ಶ್ರೀ ‌ವಿಜಯ್ ಕುಮಾರ್(ದನಿ)ರವರು, ಮಾಜಿ ಮಹಾಪೌರರಾದ ಶ್ರೀಮತಿ ಸುವರ್ಣ ಶಂಕರ್, ಮಲೆನಾಡು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶ್ರೀ ಕೆ.ಎನ್.ರಾಮಕೃಷ್ಣರವರು, ಒಕ್ಕಲಿಗ ಸಮಾಜದ ಮಹಿಳಾ ಮುಖಂಡರಾದ ಭಾರತಿ ರಾಮಕೃಷ್ಣ, ಶಾರದಮ್ಮ, ನೇತ್ರಾವತಿರವರು, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷರು, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರು, ರಾಜ್ಯ ಕಾಂಗ್ರೆಸ್ ಯುವ ಮುಖಂಡರಾದ ಶ್ರೀ ಚೇತನ್ ಗೌಡ ರವರು, ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿಗಳಾದ ರಘುಗೌಡರವರು, ಯುವ ವೇದಿಕೆಯ ಮುಖಂಡುರುಗಳಾದ ಎಸ್.ಕೆ.ರಾಘವೇಂದ್ರ, ಗುರು, ಮಧು, ಪ್ರಮೋದ್, ಧನಂಜಯ್, ಸುನಿಲ್ ಕುಮಾರ್, ಮಂಜುನಾಥ್, ನಾಗರಾಜ್ ಸೇರಿದಂತೆ ಹಲವಾರು ಒಕ್ಕಲಿಗ ಯುವ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *