ಸಂತಾಪ
ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿಗೆ
ಚಿರಪರಿಚಿತರಾಗಿದ್ದ ಹೆಚ್.ಎಸ್ ದೊರೆಸ್ವಾಮಿಯವರು ಇಂದು
ನಮ್ಮನ್ನೆಲ್ಲಾ ಅಗಲಿದ ಸುದ್ದಿ ತಿಳಿದು ತೀವ್ರ ದುಃಖವಾಯ್ತು.
ಅವರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.
ಸ್ವಾತಂತ್ರ್ಯ ಚಳವಳಿಯ ಒಂದು ಹಿರಿಯ ಕೊಂಡಿಯನ್ನು
ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ
ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ ಮತ್ತು ಅಪಾರ
ಅಭಿಮಾನಿಗಳ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ
ಎಂದು ಪ್ರಾರ್ಥಿಸುತೇನೆ. ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ
ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಸಂತಾಪ ವ್ಯಕ್ತಪಡಿಸಿದ್ದಾರೆ.