ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21ನೇ
ಸಾಲಿನಲ್ಲಿ 6 ರಿಂದ 10ನೇ ತರಗತಿಯ ಪ್ರತಿಭಾವಂತ ಮಾಧ್ಯಮಿಕ
ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ
ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ವಾರ್ಷಿಕ ರೂ. 10 ಸಾವಿರದÀಂತೆ
ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ
ಸಲ್ಲಿಕೆ ಅವಧಿಯನ್ನು ಜೂ.25 ರವರೆಗೆ ವಿಸ್ತರಿಸಲಾಗಿದೆ.
ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸುವ
ಕ್ರೀಡಾಪಟುಗಳು ಕಚೇರಿಯ ಅಧಿಕೃತ
ಜಾಲತಾಣ hಣಣಠಿ://seಡಿviಛಿeoಟಿಟiಟಿe.gov.iಟಿ/ಞಚಿಡಿಟಿಚಿಣಚಿಞಚಿ ಮೂಲಕ ಆನ್ಲೈನ್ನಲ್ಲಿ
ಮೇ.25 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ
ಇಲಾಖೆಯ ಆಯುಕ್ತರ ನಿರ್ದೇಶನದಂತೆ ಕ್ರೀಡಾ ವಿದ್ಯಾರ್ಥಿ
ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ಜೂ.25 ರವರೆಗೆ ಅವಧಿ
ವಿಸ್ತರಿಸಲಾಗಿದ್ದು, ಕ್ರೀಡಾಪಟುಗಳು ಇದರ ಸದುಪಯೋಗ ಪಡೆದು
ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಯುವ
ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಿ.ಆರ್.ಎಂ. ವಿಜ್ಞಾನ ಕಾಲೇಜು
ಎದುರು, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು
ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ
ನಿರ್ದೇಶಕ ಬಿ.ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.