ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
ಎಂ.ಪಿ.ರೇಣುಕಾಚಾರ್ಯ ಇವರು ಮೇ 29 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಮೇ 29 ರ ಶನಿವಾರ ಬೆಳಿಗ್ಗೆ 10.30 ರಿಂದ ಸಂಜೆ 7 ಗಂಟೆವರೆಗೆ
 ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ
ಸಾರ್ವಜನಿಕ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ
ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ
ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವೀಕ್ಷಣೆ ಹಾಗೂ
ಕೋವಿಡ್-19 ಹರಡುವಿಕೆ ತಡೆಗಟ್ಟುವ ಕುರಿತು
ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ
ಬಗ್ಗೆ ಮತ್ತು ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ
ಮೂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ

ಕಾರ್ಯದರ್ಶಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *