ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು,ಮೇ.೨೭ ಐ.ಡಿ.ಎಸ್.ಜಿ ಸರ್ಕಾರಿ ಕಾಲೇಜು ವತಿಯಿಂದ ಈ ಹಿಂದೇ ಕಾಲೇಜಿನ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಮತ್ತು ವಾಣಿಜ್ಯ ಶಾಸ್ತ್ರ ವಿಷಯಕ್ಕೆ ಇತರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿದ ಹಾಗೂ ಹೊಸ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಜೂನ್ ೦೧ ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:೯೪೪೮೨೪೬೯೮೮ ಮತ್ತು ೦೮೨೬೨-೨೨೦೪೬೪ ನ್ನು ಸಂಪರ್ಕಿಸಬಹುದಾಗಿದೆ ಎಂದು ಐ.ಡಿ.ಎಸ್.ಜಿ ಸರ್ಕಾರಿ ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.