ಜಿಲ್ಲೆಯಲ್ಲಿ ಮೇ 31ರಿಂದ ಒಂದು ವಾರ ಕಠಿಣ ಲಾಕ್‍ಡೌನ್ ಜಾರಿ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ 31ರಿಂದ ಜೂನ್ 7ರವರೆಗೆ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ನಿರೀಕ್ಷಿತ ವೇಗದಲ್ಲಿ…