ಬೀಜಗಳ ಬಗ್ಗೆ ಎಚ್ಚರಿಕೆ 

ಕಳಪೆ ಹಾಗೂ ಬಿಡಿ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದ್ದು,
ರೈತರು ಬಿಡಿ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ತೊಂದರೆ ಹಾಗೂ
ನಷ್ಠ ಅನುಭವಿಸಿದಲ್ಲಿ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ. 
ಆದ್ದರಿಂದ ರೈತರು ಲೂಸ್ ಬಿತ್ತನೆ ಬೀಜ ಮಾರಾಟ ಜಾಲಕ್ಕೆ ಸಿಲುಕದೇ
ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ
ಸಂಪರ್ಕ ಕೇಂದ್ರಗಳಿಂದ ಅಧಿಕೃತ ಕೃಷಿ ಪರಿಕರ
ಮಾರಾಟಗಾರರಿಂದ ಖರೀದಿಸಿ ಬಿತ್ತನೆ ಮಾಡಲು ರೈತರಲ್ಲಿ
ಕೋರಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು,
ರೈತರು ಬಿತ್ತನೆಗೆ ಭೂಮಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲಲ್ಲಿ
ರೈತರು ಅನಧಿಕೃತ ಲೂಸ್ ಮೆಕ್ಕೆಜೋಳ ಬಿತ್ತನೆ
ಬೀಜಗಳನ್ನು ಖರೀದಿಸುತ್ತಿರುವುದು ಕಂಡು ಬಂದಿದೆ ಮತ್ತು
ಹಲವರು ಲೂಸ್ ಮೆಕ್ಕೆಜೋಳ ಬೀಜಗಳನ್ನು ವಿವಿಧ ಭಾಗಗಳಿಂದ
ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವುದು ಕಂಡು
ಬಂದಿರುತ್ತದೆ.  ಭೂಮಿ ಸಿದ್ಧತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ
ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು
ಬಹು ಮುಖ್ಯ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ
ಬೆಳವಣಿಗೆ ಹಾಗೂ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ
ಬೀಜಗಳು ಅತ್ಯಮೂಲ್ಯವಾಗಿವೆ.
ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಸಂಪರ್ಕ
ಕೇಂದ್ರಗಳಲ್ಲಿ ಹಾಗೂ ನಿಗಧಿಪಡಿಸಿದ ಸಹಕಾರಿ ಸಂಘಗಳ
ಮೂಲಕ ರಿಯಾಯತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು
ವಿತರಣೆ ಮಾಡಲು ಕ್ರಮ ವಹಿಸಲಾಗಿದೆ.  ಜಿಲ್ಲೆಯ ವಿವಿಧ ಕೃಷಿ

ಪರಿಕರ ಮಾರಾಟ ಮಳಿಗೆಗಳಲ್ಲಿ ದೃಢೀಕೃತ ಬಿತ್ತನೆ ಬೀಜಗಳು
ಲಭ್ಯವಿದ್ದು, ರೈತರಿಗೆ ಯಾವುದೇ ಕೊರತೆಯಾಗುವುದಿಲ್ಲ.
ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಲೂಸ್ ಬಿತ್ತನೆ ಬೀಜ
ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡು ಬಂದಲ್ಲಿ ತಕ್ಷಣ ಈ
ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ)
ಮೊ.ಸಂ. 8277931106, 8277931207 ಅಥವಾ ತಾಲ್ಲೂಕು ಸಹಾಯಕ
ಕೃಷಿ ನಿರ್ದೇಶಕರು ಅಥವಾ ರೈತ ಸಂಪರ್ಕ ಕೇಂದ್ರದ ಕೃಷಿ
ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ
ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *