ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಬಿ.ಎ.ಬಸವರಾಜ ಅವರು
ಮೇ 31 ಮತ್ತು ಜೂನ್ 01 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಸಚಿವರು ಮೇ 31 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ
ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿಗೆ
ಆಗಮಿಸಿ ಮಧ್ಯಾಹ್ನ 3 ರಿಂದ ಸಂಜೆ 4 ವರೆಗೆ ಹೊನ್ನಾಳಿ
ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹೊನ್ನಾಳಿ ತಾಲ್ಲೂಕಿನ
ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ನಿರ್ಮಿಸಿರುವ 50 ಹಾಸಿಗೆಗಳ
ಕೋವಿಡ್ ಆರೈಕೆ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ
ಪಾಲ್ಗೊಳ್ಳುವರು ಹಾಗೂ ಹೊನ್ನಾಳಿ ಮತ್ತು ನ್ಯಾಮತಿ
ತಾಲ್ಲೂಕುಗಳಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ
ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು
ಅಧಿಕಾರಿಗಳೊಂದಿಗೆ ಸಭೆ ನಡೆಸುವರು.ಸಂಜೆ 5 ಗಂಟೆಗೆ
ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜೂನ್ 1 ರ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ
12.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ
ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ
ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು
ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 12.30
ರಿಂದ 1 ಗಂಟೆವರೆಗೆ ಆಸ್ಪತ್ರೆಗಳಿಗೆ ಭೇಟಿ ನೀಡುವರು.
ಮಧ್ಯಾಹ್ನ 1 ಕ್ಕೆ ದಾವಣಗೆರೆಯಿಂದ ನಿರ್ಗಮಿಸಿ ಸಂಜೆ 5 ಗಂಟೆಗೆ
ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ
ಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.