ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ
ಅಧ್ಯಕ್ಷತೆಯಲ್ಲಿ ಹೊನ್ನಾಳಿ ಮತ್ತು ನ್ಯಾಮತಿ
ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಕೋವಿಡ್-19 ನಿಯಂತ್ರಣಕ್ಕೆ
ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮೇ
31 ರಂದು ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿಯ ತಾಲ್ಲೂಕು
ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ಏರ್ಪಡಿಸಲಾಗಿದೆ.
ತಾಲ್ಲೂಕು ಮಟ್ಟದ ಅಧಿಕಾರಗಳ ಸಭೆಯನ್ನು
ಆಯೋಜಿಸುವ ಕುರಿತು ಶಿಷ್ಟಾಚಾರದಂತೆ ಹಾಗೂ ಕೋವಿಡ್-19
ಸುತ್ತೋಲೆಗಳ ಸೂಚನೆಯಂತೆ ಸಾಮಾಜಿಕ ಅಂತರ
ಕಾಯ್ದುಕೊಳ್ಳುವ ಎಲ್ಲಾ ಅಗತ್ಯ ಕ್ರಮಗಳನ್ನು
ಕೈಗೊಳ್ಳಲಾಗಿದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *