ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ
ರೇಣುಕಾಚಾರ್ಯ ಜೂನ್ ಮಾಹೆಯಲ್ಲಿ ದಾವಣಗರೆ ಜಿಲ್ಲೆಯಲ್ಲಿ ಪ್ರವಾಸ
ಕೈಗೊಳ್ಳಲಿದ್ದಾರೆ.
ರೇಣುಕಾಚಾರ್ಯ ಅವರು ಜೂ.01 ರಂದು ಬೆಳಿಗ್ಗೆ 8ಕ್ಕೆ ಹೊನ್ನಾಳಿ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ
ಉಪಹಾರ ವಿತರಿಸುವರು. ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆ ಆಗಮಿಸಿ
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೋವಿಡ್-19
ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಮುನ್ನೆಚ್ಚೆರಿಕೆ
ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ
ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ
ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆÀ ಹೊನ್ನಾಳಿಗೆ
ತೆರಳುವರು. ಬಳಿಕ ಸಂಜೆ 7 ರವರೆಗೆ ಹೊನ್ನಾಳಿ ತಾಲ್ಲೂಕಿನ ವಿವಿಧ
ಗ್ರಾಮಗಳಿಗೆ ಭೇಟಿ ನೀಡಿ ಕೋವಿಡ್ ನಿಯಂತ್ರಣದ ಬಗ್ಗೆ ಜಾಗೃತಿ
ಮೂಡಿಸುವರು, ಅಲ್ಲದೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡುವರು
ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ. ರುದ್ರೇಶಿ ತಿಳಿಸಿದ್ದಾರೆ.