ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
ಎಂ.ಪಿ.ರೇಣುಕಾಚಾರ್ಯ ಅವರು ಜೂ. 5 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಜೂ. 05 ರ ಶನಿವಾರ ಬೆಳಿಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೆ
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ
ಸಾರ್ವಜನಿಕ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ
ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ
ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವೀಕ್ಷಣೆ ಮಾಡಿ ಕೋವಿಡ್-19
ಹರಡುವಿಕೆ ತಡೆಗಟ್ಟುವ ಕುರಿತು ತೆಗೆದುಕೊಳ್ಳಬೇಕಾಗಿರುವ
ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ಲಸಿಕೆಯ ಮಹತ್ವದ ಬಗ್ಗೆ
ಜಾಗೃತಿ ಮೂಡಿಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ
ತಿಳಿಸಿದ್ದಾರೆ.