ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯ ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಕೆರೆ ಏರಿಯ ಅಚ್ಚುಕಟ್ಟು ರಸ್ತೆಯ ಕಾಮಗಾರಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಇಂದು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಸ್ತುತ ಕೋವಿಡ್ 19 ಮಹಾಮಾರಿಯನ್ನು ತಹಬದಿಗೆ ತರಲು ಸರ್ಕಾರ ಯುದ್ದೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ನಾವೆಲ್ಲರೂ ಈ ಕಾರ್ಯದಲ್ಲಿ ಸರ್ಕಾರದ ಜೊತೆಗೆ ನಿಲ್ಲಬೇಕು ಎಂದರು.
ಗ್ರಾಮಸ್ಥರು ಮಾತನಾಡಿ ನಮ್ಮ ಮನವಿಗೆ ಸ್ಪಂದಿಸಿ ಅಧ್ಯಕ್ಷರ ಸರ್ಕಾರದಿಂದ ಅನುದಾನ ಒದಗಿಸಿಕೊಟ್ಟಿದ್ದಾರೆ. ಮುಂದೆಯೂ ಹೀಗೇ ಕಾಡಾ ದ ವತಿಯಿಂದ ರೈತರಿಗೆ ಸ್ಪಂದನೆ ಇರಲಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ವೆಂಕಟೇಶ್ ನಾಯ್ಕ, ಮಲ್ಲಪ್ಪ, ಕಾರ್ಯಪಾಲಕ ಅಭಿಯಂತರರಾದ ಮೂಡಲಗಿರಿ, ಸಹಾಯಕ ಅಭಿಯಂತರ ರವೀಂದ್ರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.