ಮುಂದುವರಿಕೆ
ಅಗತ್ಯ ವಸ್ತುಗಳ ಖರೀದಿಗೆ ಜೂ. 07, 09 ಹಾಗೂ 11 ರಂದು ಅವಕಾಶ :
ಡಿಸಿ
ಜಿಲ್ಲೆಯಾದ್ಯಂತ ಜೂನ್ 14 ರವರೆಗೆ ಕೋವಿಡ್ ನಿಯಂತ್ರಣ
ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ
ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಜೂ.07,
09 ಮತ್ತು ಜೂನ್ 11 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12
ಗಂಟೆವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು, ತರಕಾರಿ,
ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳಿಗೆ
ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು
ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ
ನಿರ್ದೇಶನದಂತೆ ಈಗಾಗಲೇ ಹಲವಾರು ನಿಯಂತ್ರಣ
ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಜಿಲ್ಲೆಯಲ್ಲಿ ಸತತವಾಗಿ
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಪ್ರಮಾಣ ತಗ್ಗಿಸುವ
ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ
ಸಮಾಲೋಚನೆ ನಡೆಸಿದಾಗ ಅಗತ್ಯ ಕ್ರಮಗಳನ್ನು
ಕೈಗೊಳ್ಳಲು ಸೂಚಿಸಿರುವ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ
ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹೊಸ ನಿರ್ಬಂಧಗಳನ್ವಯ ಜೂ .07 ,09, ಮತ್ತು 11 ಬೆಳಿಗ್ಗೆ 6
ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಿರಾಣಿ
ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು,
ಮದ್ಯದ ಅಂಗಡಿಗಳಿಗೆ ಮಾತ್ರ ಅವಕಾಶ ಇದ್ದು ಉಳಿದ ದಿನಗಳು
ಹಾಲು ಮತ್ತು ಔಷಧಿಗಳನ್ನು ಹೊರತುಪಡಿಸಿ ಸಂಪೂರ್ಣವಾಗಿ ಬಂದ್
ಇರುತ್ತದೆ.
ಹಾಗೂ ಜೂ.14 ರವರೆಗೆ ಯಾವುದೇ ಮದುವೆ ಹಾಗೂ ಧಾರ್ಮಿಕ
ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ
ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ
ಕಾಯ್ದೆಯನ್ವಯ ಕಟ್ಟುನಿಟ್ಟಿನ ಕ್ರಮ
ಕೈಗೊಳ್ಳಲಾಗುವುದು.
ಎಲ್ಲಾ ಅಂಗಡಿ ಮುಂಗಟ್ಟುಗಳು/ವಾಣಿಜ್ಯ/ಕೈಗಾರಿಕಾ
ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ ಸರಕು ಸಾಗಣೆ
ವಾಹನಗಳಿಗೆ ಸಂಚಾರಕ್ಕೆ ಅವಕಾಶವಿರುವ ಹಿನ್ನಲೆಯಲ್ಲಿ ಸದರಿ
ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂದಿತ
ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು
ತೆಗೆದುಕೊಂಡು ಹೋಗಲು ಮಾತ್ರ ದಿನ ಪೂರ್ತಿ
ಅವಕಾಶ/ಅನುಮತಿಸಲಾಗಿದೆ.
ಕೃಷಿ ಅವಲಂಬಿತ ಕೈಗಾರಿಕೆಗಳು ಹಾಗೂ ವೈದ್ಯಕೀಯ
ಉಪಕರಣಗಳ ಘಟಕಗಳಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
ಮತ್ತು ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ,
ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು
ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು
ತತ್ಸಂಬಂಧಿತ ಅಂಗಡಿಗಳು ಮತ್ತು ಗೋದಾಮುಗಳು
ಸೇರಿದಂತೆ ಎಲ್ಲಾ ಕೃಷಿ ಕಾರ್ಯಚಟುವಟಿಕೆಗಳಿಗೆ ಹಾಗೂ
ಸಿಬ್ಬಂದಿಗಳು ಕೃಷಿ ಕೈಗಾರಿಕಾ ಸಂಸ್ಥೆಗಳು ನೀಡಿದ ಅರ್ಹ
ಗುರುತಿನ ಚೀಟಿ/ಅಧಿಕೃತ ಪತ್ರವನ್ನು ತೋರಿಸುವ ಮೂಲಕ
ಓಡಾಡುವುದಕ್ಕೆ ಅನುಮತಿಸಿದೆ.
ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ
ವಸ್ತುಗಳಾದ ಬೀಜ, ಗೊಬ್ಬರ, ಕೀಟ ನಾಶಕಗಳು, ಕೃಷಿ
ಕೋಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು
ಸಂಬಂಧಿಸಿದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು
ಮತ್ತು ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12
ಗಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿಸಿದೆ.
ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ
ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಅಂತ್ಯಸಂಸ್ಕಾರ/ಶವ
ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು
ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಆಗಮಿಸುವವರನ್ನು ಪ್ರತೀ
ಚೆಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ದಾವಣಗೆರೆ ಜಿಲ್ಲೆಯಲ್ಲಿ
ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ
ವಿಳಾಸ, ಮೊಬೈಲ್ ಸಂಖ್ಯೆಯನ್ನು
ಪಡೆದುಕೊಳ್ಳಲಾಗುವುದು ಹಾಗೂ ಹೊರ ಜಿಲ್ಲೆಯಿಂದ
ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ
ಕ್ವಾರಂಟೈನ್‍ನಲ್ಲಿ ಇರಬೇಕು.
ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ
ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್
ಪೋಸ್ಟ್‍ಗಳಲ್ಲಿ ತೋರಿಸಬೇಕು. ಇತರೆ ಎಲ್ಲಾ ಖಾಸಗಿ ವಾಹನ
ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ
ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳ (ಆಯುಷ್
ಹಾಗೂ ಪಶು ವೈದ್ಯಕೀಯ ಆಸ್ಪತ್ರೆಗಳು ಸೇರಿದಂತೆ)
ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ.
ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ
ಸಿಬ್ಬಂದಿಗಳಿಗೆ ತೋರಿಸಬೇಕು. ಖಾಸಗಿ ಭದ್ರತಾ ಸೇವೆಗಳಿಗೆ
ಅನುಮತಿಸಲಾಗಿದೆ.
ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ
ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ,
ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ
ಸಂಚರಿಸಲು ಅನುಮತಿಸಲಾಗಿದೆ.
ಹೋಟೆಲ್, ರೆಸ್ಟೋರೆಂಟ್‍ಗಳು, ಉಪಾಹಾರ ಗೃಹಗಳು
ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು
ಮಾತ್ರ ಅನುಮತಿ ಇದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು
ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.
ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ
ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ
ಆದೇಶ ಸಂಖ್ಯೆ ಆರ್‍ಡಿ/158/ಟಿಎನ್‍ಆರ್/2020 ದಿ.07.05.2021ರಂತೆ
ಕಾರ್ಯನಿರ್ವಹಿಸಬೇಕು. ಆದರೆ, ಈ ಕಛೇರಿಗಳಿಗೆ ಸಾರ್ವಜನಿಕರ
ಭೇಟಿಯನ್ನು ನಿರ್ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ಕಛೇರಿ ವೇಳೆಯನ್ನು ಮೀರಿ ತಮ್ಮ
ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ
ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ
ಅಧಿಕಾರಿ/ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ
ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.
ಭಾರತ ಸರ್ಕಾರದ, ಅದರ ಸ್ವಾಯತ್ತ/ಅಧೀನ ಸಂಸ್ಥೆಗಳ
ಮತ್ತು ಸಾರ್ವಜನಿಕ ನಿಗಮಗಳ ಕಚೇರಿಗಳಾದ
ದೂರಸಂಪರ್ಕ, ಅಂಚೆ ಕಚೇರಿ, ಬ್ಯಾಂಕುಗಳು, ಆರ್‍ಬಿಐ
ನಿಯಂತ್ರಿತ ಹಣಕಾಸು ಸಂಸ್ಥೆಗಳು, ರೈಲ್ವೇ ಮತ್ತು
ತತ್ಸಂಬಂಧಿತ ಕಾರ್ಯಚಾರಣೆಗಳು ಕೆಲವು
ಸಿಬ್ಬಂದಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸತಕ್ಕದ್ದು.
ಸರ್ಕಾರದ ಆದೇಶದ ಪ್ರಕಾರ ಸರ್ಕಾರೇತರ ಸಂಸ್ಥೆಗಳ
ಕಛೇರಿಗಳು, ಇತರೆ ಎಲ್ಲಾ ಕಚೇರಿಗಳ ಸಿಬ್ಬಂದಿಗಳು
ಮನೆಯಿಂದಲೇ ಕೆಲಸ ನಿರ್ವಹಿಸಬೇಕು. ತುರ್ತು ಸೇವೆಗಳಿಗೆ
ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ,
ಅರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ ಎಲ್ಲಾ ಅಧಿಕಾರಿಗಳು
ಮತ್ತು ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು.
ಹಾಲು, ಡೈರಿ, ಹಾಲಿನ ಭೂತು ಮತ್ತು ಮೊಟ್ಟೆ ಅಂಗಡಿಗಳು
ಮಾತ್ರ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 10
ಗಂಟೆಯವರೆಗೆ ತರೆಯಲು ಅನುಮತಿಸಲಾಗಿದೆ.
ಔಷಧಿ ಅಂಗಡಿಗಳು, ಅಗ್ನಿಶಾಮಕ, ಅಂಬುಲೆನ್ಸ್ ಮತ್ತು
ತುರ್ತು ವೈದ್ಯಕೀಯ ಸೇವೆಗಳು ವಿದ್ಯುತ್, ಪೆಟ್ರೋಲ್
ಬಂಕ್, ಆಮ್ಲಜನಕ ಉತ್ಪಾದನಾ ಘಟಕ, ನೀರು ಮತ್ತು
ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ.
ಆಟೋರೀಕ್ಷಾ ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅಧಿಕೃತ
ದಸ್ತಾವೇಜು/ ಟಿಕೆಟ್‍ಗಳನ್ನು ತೋರಿಸಿದರೆ ಮಾತ್ರ
ಸಂಚರಿಸಲು ಅನುಮತಿ.
ಪಡಿತರ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು
ಕೂಪನ್ ವ್ಯವಸ್ಥೆಯಿಂದ ಜನರು ಗುಂಪು ಸೇರದಂತೆ
ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ
ಶರತ್ತಿಗೊಳ್ಳಪಟ್ಟು ಅನುಮತಿಸಲಾಗಿದೆ.
ಇಂದಿರಾ ಕ್ಯಾಂಟೀನ್ ತೆರೆಯಲು ಅನುಮತಿಸಲಾಗಿದೆ.
ದೃಶ್ಯ ಮಾಧ್ಯಮಗಳು ಹಾಗೂ ಪತ್ರಿಕೆಗಳಿಗೆ
ಅನುಮತಿಸಲಾಗಿದೆ.
ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ
ವಾಹನಗಳಿಗೆ ಅನುಮತಿಸಲಾಗಿದೆ. ವಿಶೇಷವಾಘಿ ಆಮ್ಲಜನಕ
ತರುವ ವಾಹನವನ್ನು ತಡೆರಹಿತ ಸಾಗಾಟವನ್ನು
ಅನುಮತಿಸಲಾಗಿದೆ.
ನಿರ್ಗತಿಕರ ಕೇಂದ್ರ, ವೃದ್ಧಾಶ್ರಾಮ, ಬಾಲಮಂದಿರ,
ಬಾಲಾಶ್ರಮ, ಅನಾಥಾಶ್ರಮಗಳಿಗೆ ಅನುಮತಿಸಲಾಗಿದೆ.
ಅಂತರ್ ರಾಜ್ಯ, ಅಂತರ್ ಜಿಲ್ಲೆಯ ವ್ಯಕ್ತಿಗಳ ಸಂಚಾರವನ್ನು
ಸರ್ಕಾರದ ಆದೇಶ ಸಂಖ್ಯರ ಆರ್‍ಡಿ/158/ಟಿಎನ್‍ಆರ್ 2020 ದಿ.
07.052021 ರಂತೆ ಅನುಮತಿಸಲಾಗಿದೆ.
ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಹಾಪ್‍ಕಾಮ್ಸ್ ಮೂಲಕ
ಸಾರ್ವಜನಿಕರಿಗೆ ತರಕಾರಿಗಳನ್ನು, ಹಾಲು,ಹಣ್ಣುಗಳನ್ನು
ಸಾರ್ವಜನಿಕರ ಮನರ ಬಾಗಿಲಿಗೆ ಮಾರಾಟ ಮಾಡಲು
ಅನುಮತಿಸಲಾಗಿದೆ. ಹಾಪ್‍ಕಾಮ್ಸ್ ಲಭ್ಯವಿಲ್ಲದಿರುವ
ಪ್ರದೇಶದಲ್ಲಿ ಆಯುಕ್ತರು ಮಹಾನಗರ ಪಾಲಿಕೆ
ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ
ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮಾರಾಟ
ಮಾಡಲು ಅನುಮತಿಸಿದೆ.
ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು, ಮಾಂಸ ಮತ್ತು ಮೀನು
ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನು
ಸಂಪೂರ್ಣ ನಿಷೇಧಿಸಲಾಗಿದೆ.
ಮದ್ಯದ ಅಂಗಡಿಗಳನ್ನು ಮತ್ತು ಬಾರ್‍ಗಳನ್ನು ಈ
ಅವಧಿಯಲ್ಲಿ ನಿಷೇಧಿಸಲಾಗಿರುತ್ತದೆ.
ಕೃಷಿ ಉತ್ಪನ್ನ ಮಾರಿಕಟ್ಟೆಯಿಂದ ಸಗಟು ಮಾರಾಟಗಾರರು
ತರಕಾರಿ ಮತ್ತು ಹಣ್ಣುಗಳನ್ನು ಖರೀದಿಸಲು ಹಾಗೂ
ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧವಿರುವುದಿಲ್ಲ.
ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು
ಬಳಸಿಕೊಂಡು ಕಾಮಗಾರಿ ಕೈಗೊಳ್ಳಲು
ಅನುಮತಿಸಲಾಗಿದೆ.
ರಫ್ತು ಸಾಗಾಣೆ ಮಾಡುವ ಎಲ್ಲಾ ವಿಧದ ಸಂಸ್ಥೆಗಳು ಶೇ
30 ರಷ್ಟು ಸಿಬ್ಬಂದಿಗಳನ್ನು ಬಳಸಿಕೊಂಡು ಹಾಗೂ
ಕೋವಿಡ್ ನಿಯಾಮಾವಳಿಗಳನ್ನು ಪಾಲಿಸುವ ಮೂಲಕ
ಒಂದು ಸಾವಿರಕ್ಕಿಂತ ಹೆಚ್ಚು ಸಂಸ್ಥೆಗಳು ಶೇ 10 ರಷ್ಟು
ಸಿಬ್ಬಂದಿಗಳನ್ನು ವಾರದಲ್ಲಿ 2 ಬಾರಿ ಕೋವಿಡ್ ಪರೀಕ್ಷೆಗೆ
ಒಳಪಡಿಸುವ ಮೂಲಕ ಕಾರ್ಯನಿರ್ವಹಿಸುವುದು. ಈ
ನಿಬಂಧನೆಗಳು ಗಾರ್ಮೆಂಟ್ಸ್ ರಫ್ತು ಉದ್ದೆಮೆಗಳಿಗೆ
ಅನ್ವಯವಾಗಲಿದೆ.
ಈ ಮೇಲೆ ತಿಳಿಸಿದ ಮಾರ್ಗಸೂಚಿ/ನಿಬಂಧನೆಗಳನ್ನು ಯಾವುದೇ
ವ್ಯಕ್ತಿ/ವ್ಯಕ್ತಿಗಳು ಉಲ್ಲಂಘಿಸಿದ ಪಕ್ಷದಲ್ಲಿ, ಅಂತಹ ವ್ಯಕ್ತಿ/ವ್ಯಕ್ತಿಗಳ
ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ,2005 ರ ವಿಭಾಗ 51 ರಿಂದ 60ರ
ಅನ್ವಯ ಮತ್ತು ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ
ಸಾಂಕ್ರಾಮಿಕ ಕಾಯ್ದೆ, 2005 ವಿಭಾಗ 4,5 ಮತ್ತು 10 ರಂತೆ ಕ್ರಮ
ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಾಂತೇಶ್ ಬೀಳಗಿ
ತಿಳಿಸಿದ್ದಾರೆ.