ಮಂಗಳೂರು: ಕೋವಿಡ್ ಲಸಿಕೆ ಬಗ್ಗೆ ಪಾರದರ್ಶಕತೆಯನ್ನು ತರಬೇಕು ಎಂದು ಆಗ್ರಹಿಸಿ ‘ಸ್ಪೀಕ್ ಅಪ್ ಇಂಡಿಯಾ’ ಎಂಬ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ ವಿತರಣೆಯಲ್ಲಿ ಆಗಿರೋ ಸಮಸ್ಯೆಯನ್ನು ನಿವಾರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ. ಇನ್ನು ದೇಶದಲ್ಲಿ ಎಷ್ಟು ಲಸಿಕೆ ತಯಾರಾಗುತ್ತದೆ, ಎಷ್ಟು ಪೂರೈಕೆ ಎಂಬ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸಿ ಗೊಂದಲ ನಿವಾರಿಸಬೇಕು ಎಂದು ಆಗ್ರಹಿಸಿದರು.
ಇನ್ನು ದ್ವಿತೀಯ ಪಿಯುಸಿ ರದ್ದುಪಡಿಸಲಾಗಿದೆ.
ಎಸೆಸೆಲ್ಸಿ ಪರೀಕ್ಷೆ ನಡೆಸುವುದಾಗಿ ಹೇಳುವ ರಾಜ್ಯ ಸರಕಾರದ ಗೊಂದಲದ ಹೇಳಿಕೆಯು ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಆತಂಕಕ್ಕೀಡು ಮಾಡುವಂತೆ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದರೆ, ಸಿಇಟಿ, ನರ್ಸಿಂಗ್ ಸೇರಿದಂತೆ ಇತರ ವೃತ್ತಿಪರ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಪಾಡೇನು ಎಂದು ಪ್ರಶ್ನಿಸಿದರು.