ಶಿಕಾರಿಪುರ ಪುರಸಭೆ: ಪೌರ ಕಾರ್ಮಿಕರಿಗೆ, ನೀರು ಸರಬರಾಜು ಕಾರ್ಮಿಕರಿಗೆ, ವಾಹನ ಚಾಲಕರು ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಮಳೆಗಾಲದ ಆರಂಭದ ಮುನ್ನ ಗಮ್ ಬೂಟ್, raincoat, ಮಾಸ್ಕ, handglouse ಸೇರಿದಂತೆ ಇತರ ಎಲ್ಲ ಸುರಕ್ಷಾ ಪರಿಕರಗಳನ್ನು ಶಿಕಾರಿಪುರ ಪುರಸಭೆಯಿಂದ ವಿತರಿಸಲಾಯ್ತು.

ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷರು ಎಲ್ಲಾ ಕಾರ್ಮಿಕರು ಇದರ ಸದುಪಯೋಗವನ್ನು ಪಡಿಸಿಕೊಂಡು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಬೇಕೆಂದು ಮಾಹಿತಿ ನೀಡಿದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ರೇಣುಕಾ ಸ್ವಾಮಿ ಅವರು ಮಾತನಾಡಿ ಪೌರ ಕಾರ್ಮಿಕರು ಸೇರಿದಂತೆ ಎಲ್ಲಾ ಕಾರ್ಮಿಕರು ಪುರಸಭೆಯಿಂದ ವಿತರಿಸಲಾಗಿರುವ ಎಲ್ಲಾ ಸುರಕ್ಷಾ ಪರಿಕರಗಳನ್ನು ಅಳವಡಿಸಿಕೊಂಡು ಪೌರಕಾರ್ಮಿಕರು ತಮ್ಮ ಆರೋಗ್ಯದ ಜೊತೆ ತಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳಲು ಕರೆ ನೀಡಿದರು
ಮುಖ್ಯ ಅಧಿಕಾರಿ ಸುರೇಶ್ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಜನಪರ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಾರ್ಯವನ್ನು ಶ್ಲಾಘಿಸಿದರು ಈ ಸಂದರ್ಭದಲ್ಲಿ ಆರೋಗ್ಯ ವಿಭಾಗದ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *