ಕನಕಪುರ-ಬೆಂಗಳೂರು ಮಾರ್ಗ ಮಧ್ಯದ ಕಗ್ಗಲಿಪುರದ ಬಳಿ ಭಾನುವಾರ ಸಂಜೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಕನಕಪುರದ ಕೋಟೆ ನಿವಾಸಿಯೊಬ್ಬರಿಗೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಪ್ರಥಮ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.