ರಾಜ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಜೂ. 8 ರಂದು ದಾವಣಗೆರೆ
ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ನಗರಕ್ಕೆ ಆಗಮಿಸಿ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವರು. ಮುಂಗಾರು
ಪ್ರಾರಂಭವಾಗುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ
ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ
ಪೂರ್ವ ಸಿದ್ಧತೆ ಕುರಿತು, ಜಿಲ್ಲೆಯ ಜನಪ್ರತಿನಿಧಿಗಳು,
ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಗೆ ಸಂಬಂಧಪಟ್ಟ
ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವರು. ಸಚಿವರು ಅದೇ ದಿನ
ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸುವರು
ಎಂದು ಸಚಿವರ ಆಪ್ತ ಕಾರ್ಯದರ್ಶಿ ಜಿ.ಎಂ.ರವೀಂದ್ರ ತಿಳಿಸಿದ್ದಾರೆ.