ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
ಎಂ.ಪಿ.ರೇಣುಕಾಚಾರ್ಯ ಅವರು ಜೂ.9 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಜೂ.9 ರ ಬೆಳಿಗ್ಗೆ 10-30 ರಿಂದ ಸಂಜೆ 07 ಗಂಟೆಯವರೆಗೆ ಹೊನ್ನಾಳಿ
ಹಾಗೂ ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆ
ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್-
19 ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವೀಕ್ಷಣೆ
ನಡೆಸುವರು. ಅಲ್ಲದೆ ಸೋಂಕು ಹರಡುವಿಕೆಯನ್ನು ತಡೆಗಟ್ಟಲು
ಹಾಗೂ ಲಸಿಕಾ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸುವರು
ಎಂದು ಅವರ ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ ತಿಳಿಸಿದ್ದಾರೆ.