ಶಿಕಾರಿಪುರ ತಾಲೂಕಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಶುಕ್ರವಾರ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.
ಸ್ವಕ್ಷೇತ್ರ ಶಿಕಾರಿಪುರಕ್ಕೆ ಶುಕ್ರವಾರ ಮಾಧ್ಯಹ್ನ ಆಗಮಿಸಲಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾಧ್ಯಹ್ನದ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ ಬಳಿಕ ಶಿಕಾರಿಪುರದಲ್ಲೇ ವಾಸ್ತವ್ಯ ಹೂಡಿಲಿದ್ದಾರೆ.
ಶನಿವಾರ ಬೆಳಗ್ಗೆ ಸ್ಥಳೀಯ ಕಾರ್ಯಕ್ರಮಗಳಿಗೆ ಕಾಯ್ದಿರಿಸಲಾಗಿದ್ದು ಮಾಧ್ಯಹ್ನ ಶಿವಮೊಗ್ಗ ಜಿಲ್ಲಾಡಳಿತದೊಂದಿಗೆ ಪ್ರಗತಿ ಪರಿಶೀಲನೆ ಸಭೆ ಕೋವಿಡ್ ನಿರ್ವಹಣೆ ಕುರಿತು ಚರ್ಚೆ ನಡೆಸಲಿದ್ದಾರೆ ಬಳಿಕ ಶಿಕಾರಿಪುರದಲ್ಲಿ ವಾಸ್ತವ್ಯ.
ಭಾನುವಾರ ಬೆಳಗ್ಗೆ 11 ಗಂಟೆಗೆ ಶಿಕಾರಿಪುರ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿಸಲಾಗಿದೆ.