ಶಿವಮೊಗ್ಗ,
ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜೂನ್ 11 ಮತ್ತು 12 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಜೂನ್ 11 ರ ಮಧ್ಯಾಹ್ನ 1.15 ಕ್ಕೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಿಂದ ಹೊರಟು ಮಧ್ಯಾಹ್ನ 3.15 ಕ್ಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಸಂಜೆ 4 ಗಂಟೆಗೆ ಶಿಕಾರಿಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಶಿಕಾರಿಪುರದಿಂದ ನಿರ್ಗಮಿಸಿ ಸಂಜೆ 7 ಗಂಟೆಗೆ ಶಿವಮೊಗ್ಗದ ಪ್ರವಾಸಿ ಮಂದಿರಕ್ಕೆ ಆಗಮಿಸುವರು.

ಜೂನ್ 12 ರ ಬೆಳಿಗ್ಗೆ 6.30 ರಿಂದ 9.30 ರವರೆಗೆ ಶಿವಮೊಗ್ಗ ನಗರದಲ್ಲಿ ಮಹಾನಗರಪಾಲಿಕೆ, ಸ್ಮಾರ್ಟ್ ಸಿಟಿ ಲಿ., ಮತ್ತು ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡುವರು. ಸಂಜೆ 4 ರಿಂದ 5.30 ರವರೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಕಚೇರಿಯಲ್ಲಿ ನಡೆಯುವ ಶಿವಮೊಗ್ಗ ಜಿಲ್ಲಾ ಕೋವಿಡ್-19(ಕೊರೊನಾ ವೈರಸ್) ಹಾಗೂ ಇತರೆ ಅಭಿವೃದ್ದಿ ವಿಷಯಗಳ ಕುರಿತಂತೆ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 5.45 ಕ್ಕೆ ಶಿವಮೊಗ್ಗದಿಂದ ನಿರ್ಗಮಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *