ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಜೂನ್ 11 ಮತ್ತು 12 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಜೂನ್ 11 ರ ಮಧ್ಯಾಹ್ನ 12.45 ಕ್ಕೆ ಹಾಸನ ಜಿಲ್ಲೆಯ ಭುವನಹಳ್ಳಿ ಹೆಲಿಪ್ಯಾಡ್‍ನಿಂದ ಹೊರಟು ಮಧ್ಯಾಹ್ನ 1.30 ಕ್ಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದ ಹತ್ತಿರದ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಸಂಜೆ 4 ಗಂಟೆಗೆ ಶಿಕಾರಿಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಹಾಗೂ ಶಿಕಾರಿಪುರದಲ್ಲಿ ವಾಸ್ತವ್ಯ ಮಾಡುವರು.
ಜೂನ್ 12 ರ ಮಧ್ಯಾಹ್ನ 3.30 ಕ್ಕೆ ಶಿಕಾರಿಪುರದಿಂದ ರಸ್ತೆಯ ಮೂಲಕ ಹೊರಟು ಶಿವಮೊಗ್ಗ ನಗರಕ್ಕೆ ಆಗಮಿಸಿ, ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಶಿವಮೊಗ್ಗ ಜಿಲ್ಲಾ ಕೋವಿಡ್-19(ಕೊರೊನಾ ವೈರಸ್) ಹಾಗೂ ಇತರೆ ಅಭಿವೃದ್ದಿ ವಿಷಯಗಳ ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು. ಹಾಗೂ ಅಂದು ಶಿಕಾರಿಪುರದಲ್ಲಿ ವಾಸ್ತವ್ಯ ಮಾಡುವರು.
ಜೂನ್ 13 ರ ಬೆಳಿಗ್ಗೆ 11 ಗಂಟೆಗೆ ಶಿಕಾರಿಪುರ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12.20 ಕ್ಕೆ ಬೆಂಗಳೂರಿನ ಹೆಚ್.ಎ..ಎಲ್ ವಿಮಾನ ನಿಲ್ದಾಣ ತಲುಪುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳಾದ ಬಿ.ಪಿ.ಚನ್ನಬಸವೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.