ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
ಎಂ.ಪಿ.ರೇಣುಕಾಚಾರ್ಯ ಅವರು ಜೂ.11 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಜೂ.11 ರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3-30 ರವರೆಗೆÉ ಹೊನ್ನಾಳಿ
ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ
ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ
ಭೇಟಿ ನೀಡಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ತೆಗೆದುಕೊಂಡಿರುವ
ಕ್ರಮಗಳನ್ನು ವೀಕ್ಷಿಸುವರು. ನಂತರ ಕೋವಿಡ್-19 ಹರಡುವಿಕೆ
ತಡೆಗಟ್ಟುವ ಕುರಿತು ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ
ಕ್ರಮಗಳ ಬಗ್ಗೆ ಹಾಗೂ ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ
ಮೂಡಿಸುವರು. ಸಂಜೆ 4-15 ಗಂಟೆಗೆ ಶಿಕಾರಿಪುರಕ್ಕೆ ತೆರಳಿ
ಮುಖ್ಯಮಂತ್ರಿಗಳನ್ನು ಭೇಟಿ ಮಾಡುವರು. ರಾತ್ರಿ 7 ಗಂಟೆಗೆ
ಹೊನ್ನಾಳಿಗೆ ಆಗಮಿಸಿ ವಾಸ್ತವ್ಯ ಮಾಡುವರು ಎಂದು ವಿಶೇಷ
ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.