ಬೆಂಗಳೂರು:
‘2023ರ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಲು ಪಕ್ಷದ ಪ್ರತಿಯೊಬ್ಬರೂ ಅವಿರತವಾಗಿ ಶ್ರಮಿಸುತ್ತಿದ್ದು, ಪಕ್ಷ ಗೆಲುವು ಸಾಧಿಸಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
‘ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನನ್ನ ಬೆಂಬಲವಿದೆ. ಈ ಕಷ್ಟದ ಸಮಯದಲ್ಲಿ ಯಾರೂ ಕೂಡ ಒಬ್ಬಂಟಿ ಎಂದು ಭಾವಿಸಬಾರದು ಎಂದು ಶಿವಕುಮಾರ್ ಅವರು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ತಿಳಿಸಿದರು.
‘224 ವಿಧಾನಸಭಾ ಕ್ಷೇತ್ರದಲ್ಲಿ ಲಸಿಕಾ ಶಿಬಿರಗಳನ್ನು ನಡೆಸಲು ಮತ್ತು ಕೋವಿಡ್‌ನಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಸಹಾಯ ಮಾಡಲು ಎಲ್ಲ 31 ಜಿಲ್ಲೆಗಳಲ್ಲಿ ಕಾರ್ಯಕರ್ತರು ಸಿದ್ಧವಾಗಿದ್ದಾರೆ’ ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ
ಡಿ.ಕೆ ಶಿವಕುಮಾರ್ ಅವರು ಇಂದು ಮುಂಜಾನೆ ಆಸ್ಪತ್ರೆಯಿಂದ ಗುಣಮುಖರಾಗಿ ಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.
“ಆಸ್ಪತ್ರೆಯಿಂದ ಗುಣಮುಖರಾಗಿ ಆಗಮಿಸಿದ ನನ್ನ ಆತ್ಮೀಯರಾದ ಸಿದ್ದರಾಮಯ್ಯನವರು ರಾಜ್ಯದ ಜನರ ಸೇವೆಗೆ ಸಿದ್ಧರಾಗಿದ್ದಾರೆ. ಆರ್ಥಿಕ ಹಿಂಜರಿತದ ನಡುವೆಯೂ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಆಶಾದಾಯಕ ಮಾತುಕತೆ ನಡೆಸಿದ್ದೇವೆ” ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.