ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಮಾತನಾಡಿ ಕೇಂದ್ರ ಸರ್ಕಾರವು ಈ ದಿನ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿದ್ದು 100 ರೂಪಾಯಿ ಗಡಿ ದಾಟುವಲ್ಲಿ ಯಸ್ವಿಯಾಗಿದೆ ಈ ಸಂಧರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಬೇಕು ಎಂದು ವ್ಯಂಗ್ಯವಾಡಿದರು. ಈಗಾಗಲೇ ಸಾಮಾನ್ಯ ಜನರನ್ನು ಬೀದಿಗೆ ತಳ್ಳಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಜನ ಇನ್ನು ಸಹಿಸಲು ಸಾಧ್ಯವಿಲ್ಲ ಆದ್ದರಿಂದ ಕೆಪಿಸಿಸಿ ವತಿಯಿಂದ ಪ್ರತಿಭಟನೆಯನ್ನು ಸಾಂಕೇತಿಕವಾಗಿ ಹಮ್ಮಿಕೊಂಡಿದ್ದು ಮುಂದಿನ ದಿನಗಲ್ಲಿ ಇದು ಇನ್ನೂ ಉಗ್ರ ಸ್ವರೂಪ ಪಡೆಯಲಿದೆ ಎಂದರು.
ಬಂಕ್ ನಲ್ಲಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿಯ ಮುಖವಾಡ ಧರಿಸಿ ಕ್ರಿಕೆಟ್ ಆಡಿ ಸರ್ಕಾರದ ವಿರುಧ್ದ ಘೋಷಣೆ ಕೂಗಲಾಯಿತು .
ಈ ಸಂಧರ್ಭದಲ್ಲಿ ರಾಜ್ಯ ಸಾಮಾಜಿಕ ಜಾಲತಾಣ ಉಸ್ತುವಾರಿ ಹರೀಶ್.ಕೆ.ಎಲ್,ಲಿಯಾಖತ್ ಅಲಿ,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಮ್ರಾನ್ ಖಾನ್, ಬ್ಲಾಕ್ ಅಧ್ಯಕ್ಷರಾದ ಜಫ್ರುಲ್ಲ, ಆಯಾಜ್ ಅಹ್ಮದ್,ಸಂತೋಷ್,ಫಜ್ಲೂರ್ ರಹಮಾನ್,ರಾಜಿಕ್,ಮೊಹಮ್ಮದ್ ಜಿಕ್ರಿಯಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.