ಕೊರೊನಾ ಸೊಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಕುಟುಂಬಕ್ಕೆ ಒಬ್ಬರಿಗೆ ಸೀಮಿತವಾಗಿ ಒಂದು ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. 250-300 ಕೋಟಿ ಇದಕ್ಕಾಗಿ ವಿನಿಯೋಗಿಸಲಾಗುತ್ತದೆ ಎಂದರು.
ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಪ್ರತಿ ಬಿಪಿಎಲ್ ಕಾರ್ಡ್ ದಾರರ ಕುಟುಂಬಗಳಿಗೆ, ಸರ್ಕಾರದಿಂದ ಒಂದು ಕುಟುಂಬಕ್ಕೆ ಒಬ್ಬರಿಗೆ 1 ಲಕ್ಷ ಪರಿಹಾರ ನೀಡಲು ನಿರ್ಧಾರಿಸಲಾಗಿದೆ ಎಂದು ಹೇಳಿದ್ದಾರೆ